ಮೈಸೂರು ನಗರ

ಸರ್ಕಾರ ಹುಲಿ ದಾಳಿಗೆ ಅಗತ್ಯ ಕ್ರಮ ಜರುಗಿಸಲಿ : ಸಂಸದ ಯದುವೀರ್‌

ಮೈಸೂರು : ಹುಲಿಗಳ ದಾಳಿ ನಿಯಂತ್ರಣಕ್ಕೆ ರಾಜ್ಯಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು. ವನ್ಯಜೀವಿಗಳನ್ನು ಸಂರಕ್ಷಿಸುವ ಜತೆಗೆ, ಮಾನವನ ಜೀವವನ್ನು ಉಳಿಸಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಅಕ್ರಮ ರೆಸಾರ್ಟ್‌ಗಳಿಂದ ಹಾಗೂ ಸಫಾರಿ ಹೆಚ್ಚಳದಿಂದ ಹುಲಿಗಳ ದಾಳಿಯಾಗುತ್ತಿದೆ ಎಂಬುದಕ್ಕೆ ಲಿಂಕ್ ಕೊಡುವುದಿಲ್ಲ. ರೆಸಾರ್ಟ್‌ಗಳ ನಿರ್ಮಾಣದಿಂದ ಪ್ರಕೃತಿಯ ಮೇಲೆ ಪರಿಣಾಮ ಬೀರಬಹುದು ಹೊರತು ದಾಳಿಗೆ ಸಂಪರ್ಕವಿಲ್ಲ ಎಂದರು.

ಇದನ್ನು ಓದಿ: ಮೈಸೂರು ಭಾಗದಲ್ಲಿ ನಿರಂತರ ಹುಲಿ ದಾಳಿ ಪ್ರಕರಣ: ಅನ್ನದಾತರ ಆಕ್ರೋಶ

ಬಂಡೀಪುರ ಅರಣ್ಯ ಪ್ರದೇಶವು ಒಂದು ಸಾವಿರ ಚದರ ಕಿ.ಮೀ ವಿಸ್ತೀರ್ಣವನ್ನು ಹೊಂದಿದೆ. ಆದರೆ,ಸಫಶರಿ ನಡೆಯುತ್ತಿರುವುದು ೧೫೦ ಚದರ ಕಿ.ಮೀ ವ್ಯಾಪ್ತಿಯಲ್ಲಿ ಮಾತ್ರವಾಗಿದೆ. ನಾವು ಹುಲಿಗಳು ಕಾಡಿನಿಂದ ನಾಡಿಗೆ ಯಾಕೇ ಬರುತ್ತಿದೆ ಎಂಬುದನ್ನು ಗಮನಿಸಬೇಕು. ನಿಯಂತ್ರಣಕ್ಕೆ ಗಮನಹರಿಸಬೇಕು ಎಂದರು.

ಹುಲಿ ದಾಳಿಗಳ ನಿಯಂತ್ರಣಕ್ಕೆ ಪರಿಹಾರಗಳು ಸಾಕಷ್ಟು ಇವೆ. ಈ ವಿಚಾರ ಅಧಿಕಾರಿಗಳಿಗೂ ಗೊತ್ತಿರುತ್ತದೆ ಎಂದರು. ಅನಾದಿ ಕಾಲದಿಂದಲೂ ಬುಡಕಟ್ಟು ಜನರು ಕಾಡಿನಂಚಿನಲ್ಲಿ ವಾಸ ಮಾಡುತ್ತಿರುತ್ತಾರೆ. ಸಫಾರಿ ಕೂಡ ನಡೆಯುತ್ತಿದೆ. ಹಾಗಾಗಿ, ನಾವು ಅರಣ್ಯ ಉಳಿಸಲು ಪ್ರಯತ್ನ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

3 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

4 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

4 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

5 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

5 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

11 hours ago