ಮೈಸೂರು ನಗರ

ಈ ಸರ್ಕಾರ ಯಾವಾಗ ಕುಸಿದು ಬೀಳುತ್ತೆ ಗೊತ್ತಿಲ್ಲ: ಮಾಜಿ ಸಚಿವ ಎನ್.ಮಹೇಶ್‌ ವ್ಯಂಗ್ಯ

ಮೈಸೂರು: ಸಚಿವ ಜಮೀರ್ ಅಹಮ್ಮದ್ ಖಾನ್ ರಾಜೀನಾಮೆ ಪಡೆಯುವ ಧೈರ್ಯ ಸಿಎಂ ಸಿದ್ದರಾಮಯ್ಯಗೆ ಇಲ್ಲ. ಹಾಗಾಗಿ ಜಮೀರ್‌ ಅಹಮ್ಮದ್‌ ಖಾನ್‌ರನ್ನೇ ಸಿಎಂ ಮಾಡಲಿ ಎಂದು ಮಾಜಿ ಸಚಿವ ಎನ್.ಮಹೇಶ್‌ ವ್ಯಂಗ್ಯವಾಡಿದ್ದಾರೆ.

ವಸತಿ ಇಲಾಖೆಯಲ್ಲಿನ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಹಗರಣದ ಸರಮಾಲೆಯನ್ನೇ ಇಟ್ಟುಕೊಂಡಿದೆ. ಹೀಗಾಗಿ ಇದು ಅರೆಬೆಂದ ಸರ್ಕಾರ ಆಗಿದೆ. ಈಗ ಮತ್ತೊಂದು ಹಗರಣ ಸರ್ಕಾರದ ಮೇಲೆ ಬಂದಿದೆ. ಸರ್ಕಾರಕ್ಕೆ ಗೌರವ ಇದ್ದರೆ ವಸತಿ ಸಚಿವರ ರಾಜೀನಾಮೆ ಪಡೆಯಲಿ. ನಾಗೇಂದ್ರರ ರಾಜೀನಾಮೆ ಪಡೆದ ಹಾಗೆ ಜಮೀರ್ ರಾಜೀನಾಮೆ ಪಡೆಯಬೇಕು. ಈ ಸರ್ಕಾರ 100% ಭ್ರಷ್ಟಾಚಾರ ಸರ್ಕಾರ. ಈ ಸರ್ಕಾರದಲ್ಲಿ ಅಭಿವೃದ್ಧಿ ಏನು ಇಲ್ಲ.

ಕೇವಲ ಗ್ಯಾರಂಟಿ ಯೋಜನೆಗಳ ಜಾರಿ ಒಂದೇ ಗರಿಮೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಮುಂದೆಯೂ ಅಧಿಕಾರ ಸಿಗುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಈ ಎಲ್ಲಾ ಹಗರಣಗಳು ಸರ್ಕಾರಕ್ಕೆ ಹುರುಳಾಗುತ್ತದೆ. ಹೈಕಮಾಂಡ್‌ಗೆ ರಾಜ್ಯ ಸರ್ಕಾರವೇ ಎಟಿಎಂ ಆಗಿದೆ. ಬಿಹಾರ, ಯುಪಿ ರಾಜ್ಯಗಳ ಚುನಾವಣೆಗೆ ಹಣ ಬೇಕಾಗಿದ್ದು, ಈ ಕಾರಣಕ್ಕೆ ಸರ್ಕಾರವನ್ನು ಪ್ರಶ್ನೆ ಮಾಡುತ್ತಿಲ್ಲ. ಜಮೀರ್ ಅಹ್ಮದ್ ಖಾನ್ ರಾಜೀನಾಮೆ ಪಡೆಯೋ ಧೈರ್ಯ ಸಿಎಂಗಿಲ್ಲ ಅಂದ್ರೆ ಅವ್ರನ್ನೆ ಸಿಎಂ ಮಾಡಲಿ. ಬಿ.ಆರ್.ಪಾಟೀಲ್ ಸಮಾಜವಾದಿ ಹಿನ್ನೆಲೆಯುಳ್ಳ ಹಾಗೂ ಕಾಂಗ್ರೆಸ್‌ನ ಹಿರಿಯ ಶಾಸಕ. ಸಿಎಂ, ಡಿಸಿಎಂ ಯಾರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬಹುತೇಕ ಕಾಂಗ್ರೆಸ್ ಹಿರಿಯ ಶಾಸಕರು ಈ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈ ಸರ್ಕಾರ ಯಾವಾಗ ಕುಸಿದು ಬೀಳುತ್ತೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಇನ್ನು ಜಾತಿಗಣತಿ ಮರು ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರ ಜನರ ಕಣ್ಣೊರೆಸುವ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಪ್ರಬಲ ಸಮುದಾಯಗಳಿಗೆ ಹೆದರಿ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಜನಗಣತಿ ಜೊತೆ ಜಾತಿಗಣತಿ ಮಾಡಲು ಮುಂದಾಗಿದೆ. ಕೇಂದ್ರ ಸರ್ಕಾರದ ಜಾತಿಗಣತಿ, ಜನಗಣತಿ ಒಪ್ಪಿಕೊಂಡು ಸುಮ್ಮನಿರಬೇಕು. ಒಳ ಮೀಸಲಾತಿ ಜಾರಿ ಮಾಡಲು ಸರ್ಕಾರಕ್ಕೆ ಇಷ್ಟ ಇಲ್ಲ. ಈ ಕಾರಣಕ್ಕೆ ಒಳ ಮೀಸಲಾತಿ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ಸಿಎಂ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನಡುವೆ ಅಧಿಕಾರ ಹಂಚಿಕೆ ಆಗಿದೆ ಎಂದು ಡಿಕೆಶಿ ಬೆಂಬಲಿಗರು ಹೇಳ್ತಿದ್ದಾರೆ. ಅಧಿಕಾರ ಹಂಚಿಕೆ ಆಗುವ ಮುನ್ನವೇ ಈ ಸರ್ಕಾರ ಕುಸಿದು ಹೋಗಬಹುದು ಎಂದು ಭವಿಷ್ಯ ನುಡಿದರು.

ಇದನ್ನು ಓದಿದ್ರಾ?:- ಜಮೀರ್‌ ವಿರುದ್ಧ ದೂರು ನೀಡಲು ಜೆಡಿಎಸ್‌ ಸಿದ್ದತೆ

ಆಂದೋಲನ ಡೆಸ್ಕ್

Recent Posts

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

51 mins ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

1 hour ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

1 hour ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

2 hours ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

3 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

3 hours ago