ಮೈಸೂರು ನಗರ

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ತಿಳಿಸಿದರು.

ಉತ್ಪಾದಿಸಿದ ಸಂಪತ್ತಿನ ಸಮಾನ ಹಂಚಿಕೆ
ಶ್ರೀ ಸಿದ್ದರಾಮೇಶ್ವರ ಜಯಂತಿಯ ಶುಭ ಕೋರಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ. ಸಿದ್ದರಾಮೇಶ್ವವರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆಗಳು ತೊಲಗಬೇಕು ಎಂದು ಬಯಸಿದ್ದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ ಎಂದರು.

ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ
ಬಸವಜಯಂತಿಯಂದು ನಾನು 2013 ಮೇ 13 ರಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯವು, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದರು.

ಗ್ಯಾರಂಟಿ ಯೋಜನೆಗಳು ಮಹಿಳಾ ಸಮೂಹಕ್ಕೆ ವರದಾನ
ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ. ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ ಎಡಗೈಗೆ 5.25%, ಬಲಗೈಗೆ 5.25%, ಹಾಗೂ ಇತರ ಉಪಜಾತಿಗಳಿಗೆ 4.5% ಹಂಚಿಕೆ ಮಾಡಲಾಗಿದೆ ಎಂದರು.

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ
ಈಗ ಜಾತಿ ಸಮೀಕ್ಷೆ ನಡೆಯುತ್ತಿದ್ದು, ಜಾತಿ ಸಮೀಕ್ಷೆ ವರದಿ ಬಂದ ನಂತರ ಚರ್ಚೆ ಮಾಡೋಣ ಎಂದರು. ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಯಾರಿಗೂ ಅನ್ಯಾಯವಾಗಬಾರದು, ನೂರಕ್ಕೆ ನೂರು ಅಲ್ಲದಿದ್ದರೂ 99% ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಅವಕಾಶಗಳಿಂದ ಯಾರೂ ವಂಚಿತರಾಗಬಾರದು
ಸಮುದಾಯದವರು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಮುದಾಯದವರಿಗೆ ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು ಎಂದರು. ಸಂವಿಧಾನ ರಚನೆಯಾದ ನಂತರ ಸಮಾನತೆಯನ್ನು ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ ಎಂದರು.

ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು
ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಸಂವಿಧಾನದ ಮೂಲ ತತ್ವಗಳು. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯನ್ನು ಸುಧಾರಿಸಬೇಕಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿ ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ನಮಗೆ ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago