ಮೈಸೂರು: ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ.
ವಾಲ್ಮೀಕಿ ಹಾಗೂ ಮುಡಾದಲ್ಲಿ ನಡೆದಿರುವ ಅಕ್ರಮಗಳ ಕುರಿತು ಬಿಜೆಪಿ ಹೋರಾಟ ನಡೆಸುತ್ತಾ ಬಂದಿತ್ತು. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವ ವಿಶ್ವಾಸವಿದೆ ಎಂದರು.
ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದದ್ದು, ಅವರು ಸಂವಿಧಾನಾತ್ಮಕವಾಗಿಯೇ ಕ್ರಮ ಕೈಗೊಂಡಿದ್ದಾರೆ. ಪ್ರತಿಪಕ್ಷವಾಗಿ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದರು.
ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…
ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…