Mysore
34
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ಸಿದ್ದರಾಮಯ್ಯ ತಪ್ಪು ಮಾಡಿಲ್ಲ, ಅವರು ಧೈರ್ಯದಿಂದ ಇದ್ದಾರೆ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಅವರು ಧೈರ್ಯದಿಂದ ಇದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದೇ ಅಸಂವಿಧಾನಿಕ. ಹೀಗಾಗಿ ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.

ರಾಜ್ಯಪಾಲರು ಕಾನೂನು ಬದ್ಧವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರೆ ರಾಜೀನಾಮೆ ಕೊಡಬಹುದಿತ್ತು. ಆದರೆ ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಬಿಜೆಪಿಗರು ಅಧಿಕಾರ ದುರುಪಯೋಗಪಡಿಸಿಕೊಂಡು ಏಕಚಕ್ರಾಧಿಪತ್ಯ ಸ್ಥಾಪಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯರ ಪರ ಇಡೀ ಕಾಂಗ್ರೆಸ್‌ ಪಕ್ಷ ಇದೆ. ನನ್ನ ತಾಯಿ ಎಂದೂ ಕೂಡ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಈ ಪ್ರಕರಣದಲ್ಲಿ ಅವರ ಹೆಸರನ್ನು ಅನಗತ್ಯವಾಗಿ ತಂದಿರುವುದು ಅವರಿಗೂ ಬೇಸರವಾಗಿದೆ. ಅವರು ಕೂಡ ಇದರ ವಿರುದ್ಧ ಹೋರಾಡಲಿದ್ದಾರೆ ಎಂದರು.

ಇನ್ನು ನ್ಯಾಯಾಂಗ ವ್ಯವಸ್ಥೆಯಲ್ಲಿ ಖಂಡಿತ ನಮಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

Tags:
error: Content is protected !!