ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಅವರು ಧೈರ್ಯದಿಂದ ಇದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದೇ ಅಸಂವಿಧಾನಿಕ. ಹೀಗಾಗಿ ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ರಾಜ್ಯಪಾಲರು ಕಾನೂನು ಬದ್ಧವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರೆ ರಾಜೀನಾಮೆ ಕೊಡಬಹುದಿತ್ತು. ಆದರೆ ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಬಿಜೆಪಿಗರು ಅಧಿಕಾರ ದುರುಪಯೋಗಪಡಿಸಿಕೊಂಡು ಏಕಚಕ್ರಾಧಿಪತ್ಯ ಸ್ಥಾಪಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯರ ಪರ ಇಡೀ ಕಾಂಗ್ರೆಸ್ ಪಕ್ಷ ಇದೆ. ನನ್ನ ತಾಯಿ ಎಂದೂ ಕೂಡ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಈ ಪ್ರಕರಣದಲ್ಲಿ ಅವರ ಹೆಸರನ್ನು ಅನಗತ್ಯವಾಗಿ ತಂದಿರುವುದು ಅವರಿಗೂ ಬೇಸರವಾಗಿದೆ. ಅವರು ಕೂಡ ಇದರ ವಿರುದ್ಧ ಹೋರಾಡಲಿದ್ದಾರೆ ಎಂದರು.
ಇನ್ನು ನ್ಯಾಯಾಂಗ ವ್ಯವಸ್ಥೆಯಲ್ಲಿ ಖಂಡಿತ ನಮಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…