ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮೈಸೂರಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಂಸದ ಯದುವೀರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿದೆ. ಡೆಂಗ್ಯೂ ಬಗ್ಗೆಯು ಸಹ ಮುನ್ನೆಚ್ಚರಿಕೆ ಕ್ರಮ ತೆಗದುಕೊಂಡಿಲ್ಲ. ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲ. ಖಜಾನೆ ಸಂಪೂರ್ಣ ಬರಿದಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮೈಸೂರು ಸಂಸ್ಥಾನದಿಂದ ಇಂದಿನವರೆಗೂ ರಾಜ್ಯ ಪ್ರಗತಿಪರವಾಗಿತ್ತು. ಇದೀಗ ರಾಜ್ಯ ಆರ್ಥಿಕವಾಗಿ ಹಿಂದುಳಿಯುತ್ತಿದೆ. ಗ್ಯಾರಂಟಿ ಯೋಜನೆಗಾಗಿ ಸರ್ಕಾರದ ಖಜಾನೆ ಖಾಲಿ ಆಗಿದೆ. ಈ ಭ್ರಷ್ಟ ಸರ್ಕಾರದಿಂದ ರಾಜ್ಯದಲ್ಲಿ ಭಷ್ಟ್ರಚಾರ ತಾಂಡವವಾಡ್ತಿದೆ ಎಂದು ಟೀಕಿಸಿದರು.
ಸಿಎಂ ಅವರು ಮೈಸೂರನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ತಾರೆ. ಆದರೆ ಭ್ರಷ್ಟಚಾರ ಕಡಿಮೆ ಮಾಡಲು ಪ್ರತಿಷ್ಠೆ ಇಲ್ಲ. ಮುಡಾ ಹಗರಣ ಸಿಬಿಐಗೆ ವಹಿಸಬೇಕು. ಈ ಬಗ್ಗೆ ಸಂಪೂರ್ಣ ತನಿಖೆ ಆಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.