ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ ಎಸ್ ಭಗವಾನ್ ಕರೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳು ಸರ್ಕಾರ ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವಂತೆ ಅವರು ಪ್ರತಿಪಾದಿಸಿದರು.
ಗುರು ನಮನ ಸಮಿತಿ ವತಿಯಿಂದ ಪ್ರೊ. ಬಿ ಪಿ ಮಹೇಶ್ ಚಂದ್ರ ಗುರು ಅವರ 69ನೇ ಹುಟ್ಟುಹಬ್ಬದ ಸ್ಮರಣಾರ್ಥಿವಾಗಿ ಜಯದೇವನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ನೀಡುವ ಮೂಲಕ ಆಚರಿಸಲಾಯಿತು.
ಚಿಂತಕ ಪ್ರೊ. ಕೆ ಎಸ್ ಭಗವಾನ್ ಅವರು ಮಕ್ಕಳಿಗೆ ಪುಸ್ತಕಗಳನ್ನು ನೀಡಿ ಮಾತನಾಡಿದ ಅವರು ಉತ್ತಮ ಶಿಕ್ಷಣ ಪಡೆಯುವ ಮಕ್ಕಳು ದೇಶಕ್ಕೆ ಆಸ್ತಿಯಾಗುವ ರೀತಿಯಲ್ಲಿ ಬೆಳೆಯಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ನಿವೃತ್ತ ಅಧಿಕಾರಿ ಡಾ. ಸುಧಾ ಅವರು ಪ್ರತಿಯೊಬ್ಬ ವಿದ್ಯಾರ್ಥಿಯೂ ಹುಟ್ಟುಹಬ್ಬದ ದಿನದಂದು ಒಂದು ಗಿಡ ನೆಡವುದರ ಮೂಲಕ ಆಚರಿಸಿಕೊಳ್ಳಬೇಕು. ಮಕ್ಕಳು ಮೊಬೈಲ್ ನೋಡುವ ಗೀಳಿಗೆ ಬೀಳಬಾರದು ಬದಲಾಗಿ ಪರಿಸರ ಸಂರಕ್ಷಣೆ ಮಾಡಲು ಹೆಚ್ಚು ಆಸಕ್ತಿ ಬೆಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಸ್ತವಿಕ ನುಡಿಗಳನ್ನಾಡಿದ ಡಾ. ದಿಲೀಪ್ ನರಸಯ್ಯ. ಎಂ ಅವರು ಪ್ರೊ. ಮಹೇಶ್ ಚಂದ್ರ ಗುರು ಅವರು ಬದುಕಿರುವವರೆಗೂ ಶೈಕ್ಷಣಿಕ ಮತ್ತು ಸಾಮಾಜಿಕ ಹೋರಾಟದ ಮೂಲಕ ವಿದ್ಯಾರ್ಥಿ ಸಮೂಹ ಮತ್ತು ಸಮಾಜವನ್ನು ಎಚ್ಚರಿಸುತ್ತಿದ್ದರು. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಓದು, ಬರಹ ಮತ್ತು ಕಠಿಣ ಶ್ರಮವಿದ್ದರೆ ಮಾತ್ರ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪ್ರೊ. ಗುರು ಅವರ ಪತ್ನಿ ಪ್ರೊ. ಹೇಮಾವತಿ ಸಿ ಎಲ್ಲಾ ಮಕ್ಕಳಿಗೆ ಸಿಹಿ ಹಂಚಿದರು. ಶಾಲೆಯ ಎಂ, ಎಸ್ ಡಿ ಎಂ ಸಿ ಅಧ್ಯಕ್ಷ ಪುಟ್ಟರಾಜು, ವಿಶ್ವಜ್ಞಾನಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೃಷ್ಣ, ಶ್ರೀಮತಿ ಲಕ್ಷ್ಮಿ, ಶಾಲೆಯ ಮುಖ್ಯಸ್ಥರಾದ ಬಿ ಜಯಂತಿ ಅವರು ಇದ್ದರು.
ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…
ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…
ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…
ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…