Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌
ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರವಾಸೋದ್ಯಮ ದಿನದ ಕಾರ್ಯಕ್ರಮವನ್ನು ಚಿತ್ರೀಸಿ ರೀಲ್ಸ್‌ ಮಾಡಿ ಟ್ಯಾಗ್‌ ಮಾಡಿದರೆ, ದಸಾರ ಕಾರ್ಯಕ್ರಮ ವೇದಿಕೆಯನ್ನು ಬಹುಮಾನ ಗೆಲ್ಲುವ ಅವಕಾಶ ನಿಮ್ಮದಾಗುತ್ತದೆ.

ಈ ಬಗ್ಗೆ ಮಾಹಿತಿ ನೀಡಿರುವ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ ಸವಿತಾ ಅವರು, ಅಂದು ನಡೆಯುವ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಚಿತ್ರೀಸಿ ಇನ್ಸ್ಟಾಗ್ರಾಮ್ ರೀಲ್ಸ್ ಆಗಿ ಅಪ್ಲೋಡ್ ಮಾಡಿ, ನಂತರ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಇನ್ಸ್ಟಾಗ್ರಾಮ್ ಪೇಜ್ visit_mysuru ಅನ್ನು ಟ್ಯಾಗ್ ಮಾಡಬೇಕು. ಅದರಲ್ಲಿ ನಿಗದಿತ ಸಮಯದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಒಂದು ವಿಡಿಯೋ ಹಾಗೂ ಉತ್ತಮ ಕಂಟೆಂಟ್ ಇರುವ ಒಂದು ವಿಡಿಯೋಗೆ ಅಕ್ಟೋಬರ್ 5 ರಂದು ಅರಮನೆ ಮೈದಾನದಲ್ಲಿ ನಡೆಯುವ ದಸರಾ ವೇದಿಕೆಯಲ್ಲಿ ಬಹುಮಾನವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Tags: