ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್
ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರವಾಸೋದ್ಯಮ ದಿನದ ಕಾರ್ಯಕ್ರಮವನ್ನು ಚಿತ್ರೀಸಿ ರೀಲ್ಸ್ ಮಾಡಿ ಟ್ಯಾಗ್ ಮಾಡಿದರೆ, ದಸಾರ ಕಾರ್ಯಕ್ರಮ ವೇದಿಕೆಯನ್ನು ಬಹುಮಾನ ಗೆಲ್ಲುವ ಅವಕಾಶ ನಿಮ್ಮದಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿರುವ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ ಸವಿತಾ ಅವರು, ಅಂದು ನಡೆಯುವ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಚಿತ್ರೀಸಿ ಇನ್ಸ್ಟಾಗ್ರಾಮ್ ರೀಲ್ಸ್ ಆಗಿ ಅಪ್ಲೋಡ್ ಮಾಡಿ, ನಂತರ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಇನ್ಸ್ಟಾಗ್ರಾಮ್ ಪೇಜ್ visit_mysuru ಅನ್ನು ಟ್ಯಾಗ್ ಮಾಡಬೇಕು. ಅದರಲ್ಲಿ ನಿಗದಿತ ಸಮಯದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಒಂದು ವಿಡಿಯೋ ಹಾಗೂ ಉತ್ತಮ ಕಂಟೆಂಟ್ ಇರುವ ಒಂದು ವಿಡಿಯೋಗೆ ಅಕ್ಟೋಬರ್ 5 ರಂದು ಅರಮನೆ ಮೈದಾನದಲ್ಲಿ ನಡೆಯುವ ದಸರಾ ವೇದಿಕೆಯಲ್ಲಿ ಬಹುಮಾನವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…