ಮೈಸೂರು ನಗರ

ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನಾನು ಚುನಾವಣೆಗೂ ಮುನ್ನ ಮಾತೊಂದನ್ನು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಜಮೀನಿನಲ್ಲಿದ್ದರೆ ಚೆಂದ, ಧಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಹೇಳಿದ್ದೆ.

ಅದರಂತೆ ಇಂದು ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ನಿಮ್ಮ ಋಣ ತೀರಿಸಲು ನಾವು ಇಲ್ಲಿಗೆ ಬಂದಿದ್ದೇವೆ. ತಾಯಿ ಚಾಮುಂಡೇಶ್ವರಿ ಕೃಪೆಯಿಂದಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಈಗ ಎಲ್ಲಾ ರಾಜ್ಯಗಳಲ್ಲೂ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಲೇ ಇವೆ. ಮುಂದಿನ ದಿನಗಳಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಇನ್ನು ಕಾಂಗ್ರೆಸ್‌ ಸರ್ಕಾರ ಬಂದರೆ ಬರಗಾಲ ಎಂದು ಆರೋಪಿಸಿದ್ದರು. ಆದರೆ ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಜೂನ್‌ನಲ್ಲೇ ಕಾವೇರಿ ಮಾತೆಗೆ ಬಾಗಿನ ಸಲ್ಲಿಸಿದ್ದೇವೆ. ನಾಳೆ ಕಬಿನಿಗೆ ಬಾಗಿನ ಸಲ್ಲಿಸಲಿದ್ದೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago