ಮೈಸೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಈ ಕುರಿತು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರವಿದೆ. ಗ್ಯಾರಂಟಿ ಯೋಜನೆಗಳನ್ನು ವಿಪಕ್ಷಗಳು ಕಾಪಿ ಮಾಡಲು ಶುರು ಮಾಡಿವೆ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ಪ್ರಧಾನಿ ಮೋದಿಯವರೇ ಕರ್ನಾಟಕ ಮಾದರಿಯನ್ನೇ ದೇಶದಲ್ಲಿ ಅನುಸರಿಸುತ್ತಿದ್ದಾರೆ. ಬರೀ ಸುಳ್ಳು ಹೇಳುವುದು ಪ್ರಧಾನಿ ಮೋದಿಯವರ ಕೆಲಸ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಬರೀ ಸುಳ್ಳು ಹೇಳಿಕೊಂಡೇ ಬಂದಿವೆ. ಆದ್ದರಿಂದ ಅವರ ಸುಳ್ಳುಗಳನ್ನು ಯಾವುದೇ ಕಾರಣಕ್ಕೂ ನೀವು ನಂಬಬೇಡಿ. ಗ್ಯಾರಂಟಿ ಯೋಜನೆಗಳನ್ನು ನಾವು ನಿಲ್ಲಿಸಲ್ಲ. ಅದು ಮುಂದುವರೆಯಲಿದೆ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದರು.





