ಮೈಸೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಗಟ್ಟಿಯಾಗಿದ್ದು, ಯಾವ ಬದಲಾವಣೆ ಕೂಡ ಆಗಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪುನರುಚ್ಛರಿಸಿದ್ದಾರೆ.
ನವೆಂಬರ್‌ನಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ನೀಡಲಾಗುತ್ತದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಹೇಳಿದ್ದರು.
ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗುವುದು ನಿಜ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ಸಿದ್ದರಾಮಯ್ಯ ಖುರ್ಚಿ ಗಟ್ಟಿಯಾಗಿದೆ. ಆದ್ದರಿಂದ ಯಾವ ಬದಲಾವಣೆ ಕೂಡ ಆಗಲ್ಲ. ಅಪರೇಷನ್ ಕಮಲದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು. ಈಗ ಯಾವ ಅಪರೇಷನ್ ಮಾಡ್ತಾರೆ? ಎಂದು ಪ್ರಶ್ನಿಸಿದ ಅವರು, ಯಾವುದೇ ಬದಲಾವಣೆ ಆಗಲ್ಲ ಎಂದು ಪುನರುಚ್ಛರಿಸಿದರು.
ಇನ್ನು ವಸತಿ ಇಲಾಖೆ ಅಕ್ರಮದ ಕುರಿತು ಶಾಸಕ ಬಿ.ಆರ್.ಪಾಟೀಲ್ ಆಡಿಯೋ ಲೀಕ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಕೂಡ ಆಡಿಯೋ ಕೇಳಿಸಿಕೊಂಡಿದ್ದೇನೆ. ಅಕ್ರಮ ಆಗಿದ್ರೆ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದರು.
ಇನ್ನು ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಿನ್ನೆ ಘಟನೆ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ಮಗುವನ್ನು ಫೈನಾನ್ಸ್ ಸಿಬ್ಬಂದಿ ಅಪಹರಣ ಮಾಡಿಲ್ಲ. ಮಗುವನ್ನು ಮನೆಯಿಂದ ಅಪ್ಪ, ಅಮ್ಮನನ್ನು ತೋರಿಸಿ ಎಂದು ಕರೆದುಕೊಂಡು ಹೋಗಿದ್ದಾರೆ. ಈಗಾಗಲೇ ಸುಗ್ರೀವಾಜ್ಞೆ ಜಾರಿಯಲ್ಲಿದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…