Mysore
28
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಡಿನ್ನರ್‌ ಸಭೆಗೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ: ಎಚ್‌.ಸಿ.ಮಹದೇವಪ್ಪ

ಮೈಸೂರು: ಡಿನ್ನರ್‌ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಅರ್ಥ ಕಲ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿದ ಬಳಿಕ ಸಭೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿನ್ನರ್‌ ಪಾರ್ಟಿಗೆ ಬಗ್ಗೆ ಯಾವುದೇ ರೀತಿಯ ರಾಜಕೀಯ ಅರ್ಥವನ್ನು ಕಲ್ಪಿಸುವ ಅವಶ್ಯಕತೆ ಇಲ್ಲ. ರಾಜ್ಯ ಉಸ್ತುವಾರಿಗಳಾಗಿರುವ ಸುರ್ಜೇವಾಲಾ ಅವರೊಡನೆ ಚರ್ಚಿಸಿ, ಆ ನಂತರ ಸಭೆ ಮಾಡುತ್ತೇವೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಇದ್ದಾಗಲೂ ಹಾಗೂ ಇಲ್ಲದಿದ್ದಾಗಲೂ ಸಭೆ ನಡೆದಿವೆ ಎಂದರು.

ಇದೇ ಸಂದರ್ಭದಲ್ಲಿ ಸಿಎಂ ಹುದ್ದೆಯ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಹಾಗಾಗಿ ಸಿಎಂ ಕುರ್ಚಿಯ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ 2028ರ ಚುನಾವಣೆ ಬರುವವರೆಗೂ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದರು.

Tags:
error: Content is protected !!