ಮೈಸೂರು: ಡಿನ್ನರ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಅರ್ಥ ಕಲ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿದ ಬಳಿಕ ಸಭೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಜನವರಿ.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿನ್ನರ್ ಪಾರ್ಟಿಗೆ ಬಗ್ಗೆ ಯಾವುದೇ ರೀತಿಯ ರಾಜಕೀಯ ಅರ್ಥವನ್ನು ಕಲ್ಪಿಸುವ ಅವಶ್ಯಕತೆ ಇಲ್ಲ. ರಾಜ್ಯ ಉಸ್ತುವಾರಿಗಳಾಗಿರುವ ಸುರ್ಜೇವಾಲಾ ಅವರೊಡನೆ ಚರ್ಚಿಸಿ, ಆ ನಂತರ ಸಭೆ ಮಾಡುತ್ತೇವೆ. ಡಿಸಿಎಂ ಡಿ.ಕೆ.ಶಿವಕುಮಾರ್ ಇದ್ದಾಗಲೂ ಹಾಗೂ ಇಲ್ಲದಿದ್ದಾಗಲೂ ಸಭೆ ನಡೆದಿವೆ ಎಂದರು.
ಇದೇ ಸಂದರ್ಭದಲ್ಲಿ ಸಿಎಂ ಹುದ್ದೆಯ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಹಾಗಾಗಿ ಸಿಎಂ ಕುರ್ಚಿಯ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ 2028ರ ಚುನಾವಣೆ ಬರುವವರೆಗೂ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…