ಮೈಸೂರು ನಗರ

ರಸ್ತೆ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಜಾಣ ಮೌನರಾಗಿದ್ದಾರೆ: ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ದೇವನೂರು ಬಡಾವಣೆ ಹಾಗೂ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನೇ ಇಡಿ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಕೆಆರ್‌ಎಸ್‌ ರಸ್ತೆ ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಿನ್ಸೆಸ್‌ ರಸ್ತೆ ಬದಲಾವಣೆ ಮುನ್ನೆಲೆಗೆ ಬಂದಾಗಿನಿಂದಲೂ ಸಿಎಂ ಮೌನವಾಗಿದ್ದಾರೆ. ಸಿಎಂ ರಸ್ತೆ ವಿಷಯದಲ್ಲಿ ಜಾಣ ಮೌನ ತಾಳಿದ್ದಾರೆ. ಮುಡಾದ ಕೆಸರೆ ಗ್ರಾಮ ಬಂತಲ್ಲ ಅದಕ್ಕೂ ಕೂಡ ಸಿದ್ದರಾಮಯ್ಯರ ಹೆಸರಿಡಿ. ಅದನ್ನು ಬಿಟ್ಟು ರಾಜಮನೆತನದ ಹೆಸರು ಯಾಕೆ ತೆಗಿತೀರಾ ಎಂದು ಟಾಂಗ್‌ ನೀಡಿದರು.

ಇನ್ನು ಬಸ್‌ ಪ್ರಯಾಣ ದರ ಏರಿಕೆ ಸಂಬಂಧ ಮಾತನಾಡಿದ ಅವರು, ದರ ಹೆಚ್ಚಳ ಬರೀ ಜನರಿಗೆ ಮಾತ್ರ. ಮಂತ್ರಿಗಳಿಗೆ ದರ ಹೆಚ್ಚಳ ಅನ್ವಯವಾಗಲ್ಲ. ಜನರ ಜೇಬಿಗೆ ಕೈ ಹಾಕಿ ಲೂಟಿ ಮಾಡುತ್ತಿದ್ದಾರೆ. ಇದು ಜನರಿಗೆ ಕಷ್ಟಕೊಟ್ಟು ಖುಷಿ ಪಡುವ ಸರ್ಕಾರ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗಿ ಮಂತ್ರಿಗಳ ಅಭಿವೃದ್ಧಿಯಾಗುತ್ತಿದೆ. ಜನರ ಅಭಿವೃದ್ಧಿ ಯಾರಿಗೆ ಬೇಕು. ಎಲ್ಲದಕ್ಕೂ ಕೂಡ ಪರ್ಸಂಟೇಜ್‌ ಕೇಳುತ್ತಾರೆ. ಆಶ್ರಯ ಮನೆಗಳಿಗೂ ವಿಧಾನಸಭೆಯಲ್ಲಿ ಈಗ ವಸೂಲಿ ಶುರು ಆಗಿದೆಯಂತೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಆಪರೇಷನ್‌ ಹಸ್ತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಆಪರೇಷನ್‌ ಹಸ್ತ ನಡೆಯುತ್ತಲೇ ಇದೆ. ನಮ್ಮಲ್ಲಿ 18 ಜನ ಶಾಸಕರಿದ್ದಾರೆ. ಎಲ್ಲರೂ ಒಟ್ಟಾಗಿದ್ದಾರೆ. ಈ ಬಗ್ಗೆ ಹರೀಶ್‌ ಗೌಡ ಸಹ ಸ್ಪಷ್ಟನೆ ನೀಡಿದ್ದಾರೆ. ಶಾಸಕರು ಅಂದ ಮೇಲೆ ಒತ್ತಡವಂತೂ ಇದ್ದೇ ಇರುತ್ತೆ. ನಮ್ಮ ಶಾಸಕರು ಎಲ್ಲೂ ಹೋಗಲ್ಲ. ನಮ್ಮ ಜೊತೆಯೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

3 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

3 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

3 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

3 hours ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

3 hours ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

3 hours ago