h vishwanath
ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೇಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್‌ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದರು.
ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಅಥವಾ ಡಿಸೆಂಬರ್‌ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಈ ಹಿನ್ನೆಲೆಯಲ್ಲಿ ಜಾತಿಗಣತಿ ಮಾಡಲು ಹೇಗೆ ಸಾಧ್ಯ? ಮರುಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್‌ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ ಆಗುತ್ತಿದ್ದರು. ಆದರೆ ಹೈಕಮಾಂಡ್‌ಗೆ ಹೆದರಿಕೊಂಡು ಅದನ್ನು ಹೇಳಿಲ್ಲ. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವೇ ಇಲ್ಲ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ ವರದಿಯನ್ನು ಈಗ ತಿಪ್ಪೆಗೆ ಎಸೆದಿದ್ದಾರೆ ಎಂದು ಕಿಡಿಕಾರಿದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…