ಮೈಸೂರು ನಗರ

ಜಾತಿಗಣತಿಗೆ 170 ಕೋಟಿ ಹಣ ಖರ್ಚು ಮಾಡಿ ಈಗ ತಿಪ್ಪೆಗೆಸೆದಿದ್ದಾರೆ: ಎಚ್‌.ವಿಶ್ವನಾಥ್‌ ಆಕ್ರೋಶ

ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೇಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್‌ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದರು.

ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಅಥವಾ ಡಿಸೆಂಬರ್‌ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಈ ಹಿನ್ನೆಲೆಯಲ್ಲಿ ಜಾತಿಗಣತಿ ಮಾಡಲು ಹೇಗೆ ಸಾಧ್ಯ? ಮರುಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್‌ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ‌ ಆಗುತ್ತಿದ್ದರು. ಆದರೆ ಹೈಕಮಾಂಡ್‌ಗೆ ಹೆದರಿಕೊಂಡು ಅದನ್ನು ಹೇಳಿಲ್ಲ. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವೇ ಇಲ್ಲ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ‌ ವರದಿಯನ್ನು ಈಗ ತಿಪ್ಪೆಗೆ ಎಸೆದಿದ್ದಾರೆ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

13 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

13 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

14 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

15 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

15 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

21 hours ago