ಮೈಸೂರು: ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಈ ಬಾರಿಯ ಮೈಸೂರು ದಸರಾ ಮಹೋತ್ಸವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಶ್ವ ವಿಖ್ಯಾತ ದಸರಾನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಇಂದು (ಸೆ.20) ಈ ವಿಚಾರದ ಕುರಿತು ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದರು.
ಹಂಪಾ ನಾಗರಾಜಯ್ಯ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಂಪಸಂದ್ರ ಗ್ರಾಮದವರು. ಇವರನ್ನು ಕನ್ನಡ ಸಾಹಿತ್ಯ ಲೋಕದಲ್ಲಿ ಹಂಪನಾ ಎಂಬ ಹೆಸರಿನಿಂದಲೇ ಖ್ಯಾತಿ ಪಡೆದಿದ್ದಾರೆ. ಹಂಪಾ ನಾಗರಾಜಯ್ಯ ಅವರು ಮಂಡ್ಯ, ಗೌರಿಬಿದನೂರು, ಮಧುಗಿರಿ, ತುಮಕೂರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ. ಮೈಸೂರು ವಿವಿಯಿಂದ ಎಂ.ಎ.ಪದವಿ ಮತ್ತು ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.
ಹಂಪನಾ ಅವರು ಕುವೆಂಪು, ತೀ.ನಂ.ಶ್ರೀಕಂಠಯ್ಯ, ಡಿ.ಎಲ್.ನರಸಿಂಹಾಚಾರ್, ಎಸ್.ವಿ.ಪರಮೇಶ್ವರ್ ಭಟ್ಟ, ಕೆ.ವೆಂಕಟರಾಮಪ್ಪ, ದೇ.ಜವರೇಗೌಡ ಸಾಹಿತ್ಯಿಕ ದಿಗ್ಗಜಗಳ ನೆರಳಿನಿಂದ ಸಾಹಿತ್ಯ ಕ್ಷೇತ್ರದಲ್ಲಿ ಸ್ಫೂರ್ತಿ ಪಡೆದಿದ್ದಾರೆ. ಅಲ್ಲದೆ ಇವರಿಗೆ ನಾಡೋಜ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಇನ್ನಿತರ ಪ್ರಶಸ್ತಿಗಳು ಲಭಿಸಿವೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…