ಮೈಸೂರು ನಗರ

ಮೈಕ್ರೋ ಫೈನಾನ್ಸ್‌ ಕಂಪನಿಯವರ ಕಿರುಕುಳ ನಿಲ್ಲಬೇಕು: ವಾಟಾಳ್‌ ನಾಗರಾಜ್‌

ಮೈಸೂರು: ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲಗಾರರಿಗೆ ನೀಡುತ್ತಿರುವ ಹಿಂಸೆ ಹಾಗೂ ದೌರ್ಜನ್ಯ ನಿಲ್ಲಬೇಕೆಂದು ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಒನಕೆ ಹಿಡಿದು ವಿನೂತನವಾಗಿ ಪ್ರತಿಭಟಿಸಿದರು.

ನಗರದ ಹಾರ್ಡಿಂಗ್ ವೃತ್ತದ ಬಳಿ ಭಾನುವಾರ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನೆರೆ ರಾಜ್ಯಗಳ ಕಪ್ಪು ಹಣ ತಂದು ರಾಜ್ಯದ ಜನರಿಗೆ ಹಿಂಸೆ ಕೊಡುವ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ತಲೆ ಎತ್ತಿರುವ ಅಕ್ರಮ ಫೈನಾನ್ಸ್ ಕಂಪನಿಗಳನ್ನು ರದ್ದು ಮಾಡಬೇಕು. ಫೈನಾನ್ಸ್ ಕಂಪನಿಗಳ ವಿರುದ್ಧ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿ ತನಿಖೆ ನಡೆಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೂ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಾರಿ ನಿರ್ದೇಶನಾಲಯದವರೇ, ನಿಮಗೆ ತಾಕತ್ತಿದ್ದರೆ ಮೈಕ್ರೋ ಫೈನಾನ್ಸ್‌ಗಳ ಮೇಲೆ ದಾಳಿ ಮಾಡಿ. ಮೈಕ್ರೋ ಫೈನಾನ್ಸ್ ಸಾಲ ದೌರ್ಜನ್ಯ ನಿಲ್ಲಿಸಿ ಎಂದು ಒತ್ತಾಯಿಸಿದರು.

ಕೇಂದ್ರ ಬಜೆಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿದೆ. ನಮ್ಮ ಸಂಸದರಿಗೆ ಮಾನ ಮರ್ಯಾದೆ ಇಲ್ಲ. ಎಚ್.ಡಿ.ಕುವಾರಸ್ವಾಮಿ ಊರಲ್ಲಿರುವುದೆಲ್ಲ ಮಾತಾಡ್ತಾರೆ, ಇದರ ಬಗ್ಗೆ ಏಕೆ ಮಾತನಾಡಿಲ್ಲ. ಜೋಶಿ ಬಹಳ ಮಡಿವಂತ. ಆದರೆ ಬಜೆಟ್ ಬಗ್ಗೆ ಮಾತನಾಡಿಲ್ಲ ಯಾಕೆ? ಶೋಭಾ ಕರಂದ್ಲಾಜೆ ತುಟಿ ಬಿಚ್ಚಿಲ್ಲ ಯಾಕೆ? ಎಂದು ವಾಗ್ದಾಳಿ ನಡೆಸಿದರು.

ರಾಜೀನಾಮೆ ಕೊಡಬಾರದು:

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಇರೋದರಲ್ಲಿ ಒಬ್ಬ ಒಳ್ಳೆಯ ವ್ಯಕ್ತಿ. ಇವರೇ ಕೊನೆ ಕೊಂಡಿ, ಈ ಕೊಂಡಿ ಕಳಚಿದರೆ ರಾಜ್ಯ ದಿಕ್ಕೆಟ್ಟು ಹೋಗುತ್ತದೆ. ಸಿದ್ದರಾಮಯರನ್ನು ಸಿಎಂ ಸ್ಥಾನದಿಂದ ಇಳಿಸಲು ಜಾ.ದಳ, ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲವರು ಪಿತೂರಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು ಎಂದು ಒತ್ತಾಯಿಸಿದರು.

ರಾಜ್ಯಪಾಲರು ಪ್ರಾಸಿಕೂಷನ್ ಕೊಡಬಾರದಿತ್ತು, ರಾಜ್ಯಪಾಲರಿಗೆ ಇರುವ ಈ ಕೆಟ್ಟ ಅಧಿಕಾರ ತೆಗೆಯಬೇಕು. ಇದಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯಬೇಕು. ಸಿದ್ದರಾಮಯ್ಯ ನೂರಾರು ನಾಗರಹಾವುಗಳ ನಡುವೆ ಮಲಗಿದ್ದಾರೆ, ಜೋಪಾನವಾಗಿ ಇರಬೇಕು. ಸಿದ್ದರಾಮಯ್ಯ ಅರೆಸ್ಟ್ ಆದರೂ ರಾಜೀನಾಮೆ ಕೊಡಬೇಡಿ, ಜೈಲಿನಲ್ಲೇ ಇದ್ದು ಆಡಳಿತ ಮಾಡಿ ಎಂದರು.

 

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

1 hour ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

2 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

3 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

4 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

6 hours ago