ಮೈಸೂರು: ಹಾಸನದಲ್ಲಿ ಗಣತಿ ವಿಷರ್ಜನೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರದಿಂದ ಮೃತರಿಗೆ 5 ಲಕ್ಷ ಪರಿಹಾರ ನೀಡ್ತೇವೆ.
ಇದನ್ನು ಓದಿ : ಗಣೇಶ ಮೆರವಣಿಗೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ
ಡ್ರೈವರ್ ಗಳ ತಪ್ಪಿನಿಂದ ಅಪಘಾತ ಆಗುತ್ತಿವೆ. ಅದಕ್ಕೆ ಸರ್ಕಾರ ಕಾರಣ ಅಲ್ಲ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ತೆರಳಿ ಎಂದು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.
ಇನ್ನು ಬಿಜೆಪಿ 10 ಲಕ್ಷ ಪರಿಹಾರ ಘೋಷಣೆ ಮಾಡಲಿ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ 5 ಲಕ್ಷ ಪರಿಹಾರ ನೀಡಿದ್ದೇವೆ. ಪರಿಹಾರ ಸಾವಿಗೆ ಸಮವಲ್ಲ. ಸಾವಿಗೆ ಪರಿಹಾರ ಕೊಡೋದು ಕೂಡ ಹಿಂದಿನಿಂದ ಬಂದಿದೆ. ಕೇಂದ್ರ ಸರ್ಕಾರ 2 ಲಕ್ಷ ಕೊಟ್ಟಿದೆ, 10 ಲಕ್ಷ ಕೊಡೋಕೆ ಆಗಲ್ಲ. ಬಿಜೆಪಿ ಆಡಳಿತದ ಅವಧಿಯಲ್ಲಿ ಅವರೆಷ್ಟು ಕೊಟ್ಟಿದ್ದರು ಎಂದು ಪ್ರಶ್ನಿಸಿದರು.





