ಮೈಸೂರು ನಗರ

ಸಿಎಂ ಸಿದ್ದು ವಿರುದ್ಧದ ಇಡಿ ಪ್ರಕರಣದ ಹಿಂದೆ ಎಚ್‌ಡಿಕೆ ಕೈವಾಡ: ಲಕ್ಷ್ಮಣ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ʼಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆʼ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವುದರ ಹಿಂದೆ ಕೇಂದ್ರ ಎಚ್‌.ಡಿ.ಕುಮಾರಸ್ವಾಮಿ ಅವರ ಕೈವಾಡವಿದೆ ಎಣದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್‌ ಆರೋಪಿಸಿದರು.

ನಗರದಲ್ಲಿ ಇಂದು (ಅಕ್ಟೋಬರ್‌ 2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ʼಮುಡಾ ಪ್ರಕರಣವನ್ನು ಕೇಂದ್ರದ ತನಿಖಾ ಸಂಸ್ಥೆಯಿಂದ ನಡೆಸುವಂತೆ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಆಧರಿಸಿ ಇ.ಡಿ.ಅಧಿಕಾರಿಗಳು ಇಸಿಐಆರ್ ದಾಖಲಿಸಿದ್ದರು. ಅದೇ ರೀತಿ ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಾಗುವಂತೆ ಮಾಡಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಕೂಡ ಸಿದ್ದರಾಮಯ್ಯರ ಅವರ ವಿರುದ್ಧ ದೂರು ಇ.ಡಿಗೆ ದೂರು ನೀಡಿದ್ದಾರೆʼ ಎಂದು ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಹುನ್ನಾರ ನಡೆಸುತ್ತಿವೆ. ಆ ಎರಡೂ ಪಕ್ಷಗಳಲ್ಲಿ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರೇ ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದಾರೆ. ಇದರಲ್ಲಿ ಸ್ನೇಹಮಯಿ ಕೃಷ್ಣ ಮಾತ್ರ ಕೃಷ್ಣನ ಪಾತ್ರಧಾರಿಯಷ್ಟೇ ಎಂದು ವಾಗ್ದಾಳಿ ನಡೆಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಹಣದ ಅವ್ಯವಹಾರ ನಡೆಸಿಲ್ಲವಾದರೂ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಈಗಾಗಲೇ ದೂರುದಾರಿಂದ ಅರ್ಜಿ ಸ್ವೀಕಾರಿಸಿದ ಹೈಕೋರ್ಟ್‌ ಪ್ರಾಸಿಕ್ಯಷನ್‌ಗೆ ಅನುಮತಿ ನೀಡಿದೆ. ಅಲ್ಲದೇ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಎಫ್‌ಐಆರ್‌ ದಾಖಲಿಸಿ ಅರ್ಜಿ ವಿಚಾರಣೆ ನಡೆಸುತ್ತಿದೆ. ಈ ಮಧ್ಯೆಯೇ ಇ.ಡಿ.ಪ್ರವೇಶಿಸಿರುವ ಸಂದರ್ಭವನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ರಾಜೀನಾಮೆ ಕೋರಿ ಸಿದ್ದರಾಮಯ್ಯ ಅವರ ಹಿಂದೆ ಬಿದ್ದಿದ್ದಾರೆ. ಇದರಿಂದ ಮನನೊಂದ ಸಿದ್ದರಾಮಯ್ಯ ಅವರ ಪತ್ನಿ ಸ್ವಂತ ನಿವೇಶನವನ್ನು ಮುಡಾ ಸ್ವಾಧೀನಪಡಿಸಿಕೊಂಡಿದ್ದ ಬಳಿಕ ಅವರಿಗೆ ಪರಿಹಾರವಾಗಿ 50:50 ಅನುಪಾತದ ಮೂಲಕ ನೀಡಿದ್ದ 14 ಬದಲಿ ನಿವೇಶನಗಳನ್ನು ಮುಡಾಕ್ಕೆ ವಾಪಾಸ್‌ ಮಾಡಿದ್ದಾರೆ. ಅಲ್ಲದೇ ನಿವೇಶನ ಕಳೆದುಕೊಂಡಿದ್ದಕ್ಕೆ ಪರಿಹಾರವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡಲಿದ್ದಾರೆ. ಆದರೆ ಇದೀಗ 50:50 ಅನುಪಾತದಲ್ಲಿ ನಿವೇಶನ ಪಡೆದಿರುವ ಎಲ್ಲರಿಂದಲೂ ನಿವೇಶನಗಳನ್ನು ಹಿಂತಿರುಗಿಸುವ ಕೆಲಸವನ್ನು ಬಿಜೆಪಿ ಮತ್ತು ಜೆಡಿಎಸ್‌ ನಾಯಕರೇ ಮಾಡಬೇಕು.

ಮುಡಾ ಹಗರಣದ ಆಪಾದನೆಯಲ್ಲಿ ತೊಡಗಿದ್ದ ಶಾಸಕ ಟಿ.ಎಸ್‌.ಶ್ರೀವತ್ಸ ಹಾಗೂ ಬಿಜೆಪಿ ಹಿಂದುಳದ ವರ್ಗಗಳ ಮೊರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಅವರೇ ಅನುಭವಿಗಳಿಂದ ನಿವೇಶನಗಳನ್ನು ಹಿಂತಿರುಗಿಸುವಂತೆ ಹೋರಾಟ ಮಾಡಲಿ. ಇಲ್ಲವಾದರೆ ಅವರ ಮನೆ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ ಒಗ್ಗಟ್ಟು ಇದೆ. ಶಾಸಕ ಮತ್ತು ಸಚಿವರೆಲ್ಲರೂ ಅವರೊಂದಿಗೆ ಇದ್ದೇವೆ. ಕೇಂದ್ರದಲ್ಲಿ ರಾಜೀನಾಮೆ ವಿಚಾರಕ್ಕೆ ಬಂದರೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪ್ರಹ್ಲಾದ್‌ ಜೋಶಿ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರನ್ನೊಳಗೊಂಡಂತೆ 27 ಕೇಂದ್ರ ಸಚಿವರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಅವರೇಕೆ ರಾಜೀನಾಮೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು.
ಕೆಪಿಸಿಸಿ ಸದಸ್ಯ ಭಾಸ್ಕರ್‌, ಕಾಂಗ್ರೆಸ್‌ಮ ನಗರ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಗೀರೀಶ್‌ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಮಹೇಶ್‌ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಅರ್ಚನ ಎಸ್‌ ಎಸ್

Recent Posts

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

12 mins ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

58 mins ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

1 hour ago

ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಮೊಗಿಲಯ್ಯ ವಿಧಿವಶ

ಹೈದರಾಬಾದ್:‌ ಟಾಲಿವುಡ್‌ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…

2 hours ago

ರಾಜಕೀಯ ಅಧಿಕಾರ ಹಿಡಿಯಲು ಅಂಬೇಡ್ಕರ್‌ ಹೆಸರು ಬಳಕೆ: ಸಿದ್ದರಾಮಯ್ಯ ವಿರುದ್ಧ ಆರ್‌.ಆಶೋಕ್‌ ವಾಗ್ದಾಳಿ

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕುರಿತಂತೆ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…

2 hours ago

ಕಾಶ್ಮೀರದಲ್ಲಿ ಭರ್ಜರಿ ಬೇಟೆಯಾಡಿದ ಭಾರತೀಯ ಸೇನೆ: ಐವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್‌…

2 hours ago