ಮೈಸೂರು: ಇಂದು ಆಷಾಢ ಮಾಸದ ಕೊನೆಯ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಪತ್ನಿ ಭವಾನಿ, ಪುತ್ರ ಸೂರಜ್ ಸೇರಿದಂತೆ ಕುಟುಂಬ ಸಮೇತ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕಳೆದ ಮೂರು ಆಷಾಢ ಶುಕ್ರವಾರಗಳ ಜೊತೆಗೆ ನಿನ್ನೆ ನಡೆದ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿಯ ಹಿನ್ನೆಲೆಯಲ್ಲಿ ಎಚ್.ಡಿ.ರೇವಣ್ಣ ಬೆಟ್ಟಕ್ಕೆ ಆಗಮಿಸಿದ್ದರು. ಇಂದು ಕೊನೆಯ ಆಷಾಢ ಶುಕ್ರವಾರದ ಅಂಗವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದು, ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.





