ಮೈಸೂರು : ಇಡೀ ದೇಶದ ನಾಗರಿಕರು ಆರೋಗ್ಯವಾಗಿರಬೇಕು ಎಂಬ ಬಹು ಮುಖ್ಯ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ‘ಫಿಟ್ ಇಂಡಿಯಾ’ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಕ್ರೀಡೋತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಸಂಸದರ ಕ್ರೀಡೋತ್ಸವ ಅಂಗವಾಗಿ ಮೈಸೂರು ವಿ.ವಿ ದೈಹಿಕ ಶಿಕ್ಷಣ ವಿಭಾಗ, ಮೈಸೂರು ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್, ಫೋನಿಕ್ಸ್ ಇಂಟರ್‌ನ್ಯಾಷನಲ್ ಅಕಾಡೆಮಿ, ಸೈಕ್ಲೋಪೀಡಿಯಾ, ಫನ್ ಪ್ಯಾಲೇಸ್, ಸನ್‌ಪ್ಯೂರ್, ಲಿಟ್ಲ್ ಎಲ್ಲಿ, ಬುಕ್ಸ್ ಅಂಡ್ ಬ್ರೇನ್ಸ್ ಜಂಟಿ ಸಹಯೋಗದಲ್ಲಿ ಮಾನಸಗಂಗೋತ್ರಿಯಲ್ಲಿ ಆಯೋಜಿಸಿದ್ದ ಕಿಡ್ಸ್ ಸೈಕ್ಲೊಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಇದನ್ನು ಓದಿ: ಡಿಕೆಶಿ ಸಿಎಂ ಆಗ್ತಾರೋ, ಇಲ್ವೋ : ಗಿಣಿ ಶಾಸ್ತ್ರ ಕೇಳಿದ ಮಂಡ್ಯ ಬಿಜೆಪಿ ನಾಯಕರು
ಫಿಟ್ ಇಂಡಿಯಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆಂದೋಲನವಾಗಿದೆ. ಕಿರಿಯ ವಯಸ್ಸಿನಿಂದಲೇ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕೆಂಬ ಪ್ರಧಾನಮಂತ್ರಿಯವರ ಆಶಯದಂತೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ವಿವಿಧ ಕ್ರೀಡೋತ್ಸವ ಆಯೋಜಿಸಲಾಗುತ್ತಿದೆ ಎಂದರು.
ಆರೋಗ್ಯ ಕುರಿತು ಜಾಗೃತಿ ಮೂಡಿಸುವುದು ನಮ್ಮ ಮುಖ್ಯ ಧ್ಯೇಯ. ಕಿರಿಯ ವಯಸ್ಸಿನಿಂದಲೇ ಕ್ರೀಡೆಗೆ ಆದ್ಯತೆ ನೀಡಿದರೆ ಭವಿಷ್ಯದಲ್ಲಿ ನಮ್ಮ ದೇಶದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿಯೂ ಪಸರಿಸುವಂತಾಗಲಿದೆ. ಸೈಕ್ಲಿಂಗ್ ಸ್ಪರ್ಧೆಯಲ್ಲಿ ಅಗಾಧ ಅವಕಾಶವಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಅವರಿಗೆ ವೇದಿಕೆ ಕಲ್ಪಿಸಲು ಬದ್ಧವಿರುವುದಾಗಿ ತಿಳಿಸಿದರು.





