Mysore
21
mist

Social Media

ಗುರುವಾರ, 29 ಜನವರಿ 2026
Light
Dark

ಫಾರೂಕಿಯಾ ದಂತ ಕಾಲೇಜು ವತಿಯಿಂದ ಆರೋಗ್ಯ ಮ್ಯಾರಥಾನ್

ಮೈಸೂರು: ಮೈಸೂರಿನ ಫಾರೂಕಿಯಾ ದಂತ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆರೋಗ್ಯ ಕ್ರೀಡಾ ಮ್ಯಾರಥಾನ್ ನಡಿಗೆ ಹಮ್ಮಿಕೊಂಡು ಸಾರ್ವಜನಿಕರಿಗೆ ದಂತ ಆರೋಗ್ಯದ ಅರಿವು ಹಾಗೂ ಉಚಿತ ತಪಾಸಣೆ ಆಯೋಜಿಸಲಾಗಿತ್ತು.

ಇಂದು (ಫೆ.7) ನಗರದ ಕೆ.ಆರ್. ಆಸ್ಪತ್ರೆ ವೃತ್ತದಿಂದ ಆರಂಭಗೊಂಡ ಮ್ಯಾರಥಾನ್ ನಡಿಗೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಪ್ರಸ್ತುತ ಯಾಂತ್ರಿಕ ಮತ್ತು ಒತ್ತಡದ ಜೀವನ‌ದಿಂದಾಗಿ ಮನುಷ್ಯನಿಗೆ ಆರೋಗ್ಯ ರಕ್ಷಣೆ ದೊಡ್ಡ ಸವಾಲಾಗಿದ್ದು ಮೈಸೂರಿನ ಪ್ರತಿಷ್ಠಿತ ಫಾರೂಕಿಯಾ ಸಂಸ್ಥೆ ಬಡ ಮತ್ತು ಮಧ್ಯಮ ವರ್ಗಗಳಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ಒದಗಿಸುವ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯ ಡಾ.ಕೆ.ಸಿ. ಶಶಿಧರ್ ಮಾತನಾಡಿ, ಮನುಷ್ಯ ಆರೋಗ್ಯವಾಗಿರಲು ದಂತ ಆರೋಗ್ಯ ಅತೀ ಮುಖ್ಯ. ಇದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಈ ದಿಸೆಯಲ್ಲಿ ಫಾರೂಕಿಯಾ ದಂತ ಕಾಲೇಜು ಮತ್ತು ‌ಆಸ್ಪತ್ರೆ ಹಮ್ಮಿಕೊಂಡಿರುವ ಆರೋಗ್ಯ ಮ್ಯಾರಥಾನ್ ಜನರಿಗೆ ಉಪಯುಕ್ತವಾಗಲಿದೆ ಎಂದು ತಿಳಿಸಿದರು.

ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಹೆಚ.ಪಿ. ಶ್ರೀನಾಥ್ ಮಾತನಾಡಿ, ತಮ್ಮ ಸಂಸ್ಥೆಯ ವತಿಯಿಂದ ಮಾರ್ಚ್ ಅಂತ್ಯದವರೆಗೂ ಉಚಿತ ದಂಡ ತಪಾಸಣೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸುಮಾರು 2 ಸಾವಿರ ಮಂದಿಗೆ ಈ ಅವಕಾಶ ದೊರಕಿದೆ. ಅಗತ್ಯವಿದ್ದಲ್ಲಿ ಚಿಕಿತ್ಸೆಗೂ ತಮ್ಮ ಸಂಸ್ಥೆ ಮುಂದಾಗಲಿದೆ ಎಂದು ಮಾಹಿತಿ ನೀಡಿದರು.

ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ. ಸಂದೀಪ್ ಕೆ.ಟಿ. ಪ್ರಾಂಶುಪಾಲರಾದ ಡಾ. ಸಂಜಯ್ ಮುರುಗೋಡ್ ಮತ್ತು ಸಿಬ್ಬಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:
error: Content is protected !!