ಮೈಸೂರು: ಮೈಸೂರಿನ ಫಾರೂಕಿಯಾ ದಂತ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆರೋಗ್ಯ ಕ್ರೀಡಾ ಮ್ಯಾರಥಾನ್ ನಡಿಗೆ ಹಮ್ಮಿಕೊಂಡು ಸಾರ್ವಜನಿಕರಿಗೆ ದಂತ ಆರೋಗ್ಯದ ಅರಿವು ಹಾಗೂ ಉಚಿತ ತಪಾಸಣೆ ಆಯೋಜಿಸಲಾಗಿತ್ತು.
ಇಂದು (ಫೆ.7) ನಗರದ ಕೆ.ಆರ್. ಆಸ್ಪತ್ರೆ ವೃತ್ತದಿಂದ ಆರಂಭಗೊಂಡ ಮ್ಯಾರಥಾನ್ ನಡಿಗೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪ್ರಸ್ತುತ ಯಾಂತ್ರಿಕ ಮತ್ತು ಒತ್ತಡದ ಜೀವನದಿಂದಾಗಿ ಮನುಷ್ಯನಿಗೆ ಆರೋಗ್ಯ ರಕ್ಷಣೆ ದೊಡ್ಡ ಸವಾಲಾಗಿದ್ದು ಮೈಸೂರಿನ ಪ್ರತಿಷ್ಠಿತ ಫಾರೂಕಿಯಾ ಸಂಸ್ಥೆ ಬಡ ಮತ್ತು ಮಧ್ಯಮ ವರ್ಗಗಳಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ಒದಗಿಸುವ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯ ಡಾ.ಕೆ.ಸಿ. ಶಶಿಧರ್ ಮಾತನಾಡಿ, ಮನುಷ್ಯ ಆರೋಗ್ಯವಾಗಿರಲು ದಂತ ಆರೋಗ್ಯ ಅತೀ ಮುಖ್ಯ. ಇದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಈ ದಿಸೆಯಲ್ಲಿ ಫಾರೂಕಿಯಾ ದಂತ ಕಾಲೇಜು ಮತ್ತು ಆಸ್ಪತ್ರೆ ಹಮ್ಮಿಕೊಂಡಿರುವ ಆರೋಗ್ಯ ಮ್ಯಾರಥಾನ್ ಜನರಿಗೆ ಉಪಯುಕ್ತವಾಗಲಿದೆ ಎಂದು ತಿಳಿಸಿದರು.
ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಹೆಚ.ಪಿ. ಶ್ರೀನಾಥ್ ಮಾತನಾಡಿ, ತಮ್ಮ ಸಂಸ್ಥೆಯ ವತಿಯಿಂದ ಮಾರ್ಚ್ ಅಂತ್ಯದವರೆಗೂ ಉಚಿತ ದಂಡ ತಪಾಸಣೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸುಮಾರು 2 ಸಾವಿರ ಮಂದಿಗೆ ಈ ಅವಕಾಶ ದೊರಕಿದೆ. ಅಗತ್ಯವಿದ್ದಲ್ಲಿ ಚಿಕಿತ್ಸೆಗೂ ತಮ್ಮ ಸಂಸ್ಥೆ ಮುಂದಾಗಲಿದೆ ಎಂದು ಮಾಹಿತಿ ನೀಡಿದರು.
ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ. ಸಂದೀಪ್ ಕೆ.ಟಿ. ಪ್ರಾಂಶುಪಾಲರಾದ ಡಾ. ಸಂಜಯ್ ಮುರುಗೋಡ್ ಮತ್ತು ಸಿಬ್ಬಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…