ಮೈಸೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸರ್ಕಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸಿ, ಆಗಸ್ಟ್ ನಿಂದ ಪೂರ್ಣಪ್ರಮಾಣದ ಸೇವೆಗಳನ್ನು ಇನ್ನಷ್ಟು ಹೆಚ್ಚಿಸುವಂತೆ ಹಿರಿಯ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು. ಮತ್ತಷ್ಟು ಮೂಲಸೌಕರ್ಯಗಳ ವೃದ್ಧಿಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಆನಂತರ, ಕೆ.ಆರ್. ಆಸ್ಪತ್ರೆಗೂ ಭೇಟಿ ನೀಡಿದ ಅವರು, ಟೆಲಿ ಐಸಿಯು ಸೇವೆಯನ್ನು ತಾಲೂಕುಗಳಿಗೂ ವಿಸ್ತರಣೆ ಮಾಡಬೇಕೆಂದು ಸೂಚನೆ ನೀಡಿದರು.
ನಗರದ ಜಿಲ್ಲಾಸ್ಪತ್ರೆ ಸೇರಿದಂತೆ ಸ್ಥಳೀಯ ಆಸ್ಪತ್ರೆಗಳಿಗೂ ಭೇಟಿ ನೀಡಿ ಅಲ್ಲಿರುವಂತಹ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ನಂತರ ಆರೋಗ್ಯ ಸಿಬ್ಬಂದಿಗಳ ಜೊತೆ ಚರ್ಚಿಸಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮ ಅನುಸರಿಸುವಂತೆ ಸೂಚಿಸಿದರು.
ಡಯಾಲಿಸಿಸ್ ಕೇಂದ್ರ ಹಾಗೂ ವಿವಿಧ ವಾರ್ಡ್‌ಗಳಿಗೆ ತೆರಳಿ ರೋಗಿಗಳನ್ನು ಭೇಟಿ ಮಾಡಿ, ಕುಂದು ಕೊರತೆ ಆಲಿಸಿದರು.
ಆನಂತರ, ಡಿಎಚ್‌ಒ ಡಾ ಪಿ. ಸಿ. ಕುಮಾರಸ್ವಾಮಿ ಅವರಿಂದ ಸಿಬ್ಬಂದಿಗಳ ಕೊರತೆಯ ಬಗ್ಗೆ ಮಾಹಿತಿ ಪಡೆದರು.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…