ಮೈಸೂರು: ಬೈಕ್ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ.
ಚಾಮರಾಜನಗರ ತಾಲ್ಲೂಕಿನ ನಂಜೇದೇವರಪುರದ ರವಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಬೈಕ್ ಓಡಿಸಿಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿದ್ದು, ಕೆಳಗೆ ಬಿದ್ದಿದ್ದಾರೆ.
ರವಿ ಅವರು ಬೈಕ್‌ನಿಂದ ಕೆಳಗೆ ಬೀಳುವ ದೃಶ್ಯ ಹತ್ತಿರಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರವಿಗೆ ಹಾರ್ಟ್ ಅಟ್ಯಾಕ್ ಆಗುತ್ತಿದ್ದಂತೆ ನಿಯಂತ್ರಣ ತಪ್ಪಿದ ಬೈಕ್, ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…