ಮೈಸೂರು ನಗರ

ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ಜಯದೇವ ಆಸ್ಪತ್ರೆಯಲ್ಲಿ ಜನವೋ ಜನ

ಮೈಸೂರು: ರಾಜ್ಯದಿಂದ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡುಬಂದಿದೆ.

ಆಸ್ಪತ್ರೆಗೆ ಬೆಳ್ಳಂಬೆಳಿಗ್ಗೆಯೇ ಆಗಮಿಸುತ್ತಿರುವ ಜನರು ಕೌಂಟರ್‌ ಹಾಗೂ ಇನ್ನಿತರೆ ಕೊಠಡಿಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಸಾಮಾನ್ಯ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವರು ಕೂಡ ಸ್ಥಳೀಯ ಆಸ್ಪತ್ರೆಗೆ ಹೋಗುವ ಬದಲು ನೇರವಾಗಿ ಜಯದೇವ ಆಸ್ಪತ್ರೆಗೆ ಬರುತ್ತಿದ್ದಾರೆ.

ಹೃದಯಾಘಾತಕ್ಕಿಂತ ಹೆಚ್ಚಾಗಿ ಅದರ ಭಯದಲ್ಲೇ ಹೆಚ್ಚಿನ ಜನರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿರುವವರಿಗೆ ತೀವ್ರ ಸಮಸ್ಯೆ ಉಂಟಾಗಿದೆ.

ಪ್ರತಿನಿತ್ಯ ಮೈಸೂರು ಜಿಲ್ಲೆ ಸೇರಿದಂತೆ ಹೊರಗಡೆ ಜಿಲ್ಲೆಗಳಿಂದ 400 ರಿಂದ 500 ಜನ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದು, ಆಸ್ಪತ್ರೆ ಸಿಬ್ಬಂದಿ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

7 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

9 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago