ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಅಗ್ರಹಾರದಲ್ಲಿ ಇರುವ ಕೃಷ್ಣರಾಜ ಪೊಲೀಸ್ ಠಾಣೆಯ ಆವರಣಕ್ಕೆ ಮಳೆ ನೀರು ನುಗ್ಗಿದೆ.
ಇದರ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಠಾಣೆಯ ಒಳಗೆ ತೆರಳಲು ಪೊಲೀಸರಿಗೂ ಸಾಧ್ಯವಾಗಲಿಲ್ಲ. ಠಾಣೆಯ ಮುಂದೆ ಅವೈಜ್ಞಾನಿಕ ಮೋರಿ ಕಾಮಗಾರಿ ನಡೆದಿರುವುದರಿಂದ ಮಳೆ ಬಂದಾಗ ಈ ಸಮಸ್ಯೆ ಮಾಮೂಲು ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ.
ಉಕ್ಕಿ ಹರಿದ ಮ್ಯಾನ್ ಹೋಲ್: ಇನ್ನು ನಗರದ ಅಗ್ರಹಾರ, ಚಾಮರಾಜ ಜೋಡಿ ರಸ್ತೆಯ ಕೆಲವೆಡೆ ಮ್ಯಾನ್ ಹೋಲ್ ಉಕ್ಕಿ ಹರಿದ ಪರಿಣಾಮ ರಸ್ತೆಯಲ್ಲಿ ಕೊಳಚೆ ನೀರು ಹರಿಯುವಂತಾಗಿತ್ತು. ಪೌರ ಕಾರ್ಮಿಕರು ಸ್ಥಳಕ್ಕೆ ಬಂದು ಸಮಸ್ಯೆಯನ್ನು ಸರಿಪಡಿಸುತ್ತಿದ್ದುದು ಕಂಡುಬಂತು.
ಜೋರು ಮಳೆಗೆ ನಗರದ ಅನೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತಾದರೂ ಸೆಸ್ಕ್ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ದುರಸ್ತಿಗೊಳಿಸುತ್ತಿದ್ದುದು ಕಂಡುಬಂತು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…