ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಸಂಜೆಯ ವೇಳೆಗೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲಸ ಮುಗಿಸಿ ಮನೆಗೆ ಹೋಗಲು ಜನರು ಪರದಾಟ ನಡೆಸಿದರು.
ಇನ್ನೂ ಜಿಟಿ ಜಿಟಿ ಮಳೆಯಿಂದ ಚಳಿಯ ವಾತಾವರಣ ನಿರ್ಮಾಣವಾಗಿದ್ದು, ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.
ಬೆಳಿಗ್ಗೆಯಿಂದಲೂ ಮೈಸೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಪರಿಣಾಮ ಸಂಜೆಯ ವೇಳೆಗೆ ಮಳೆ ಶುರುವಾಗಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.