Mysore
22
haze

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಭಾರೀ ಮಳೆಯಿಂದ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತಗಳು ಆಗುತ್ತಲೇ ಇವೆ. ಈ ಬೆನ್ನಲ್ಲೇ ಭಾರೀ ಮಳೆಯಿಂದ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿತವಾಗಿದೆ.

ಚಿತ್ರಮಂದಿರದ ಹಿಂಬದಿ ಗೋಡೆ ಕುಸಿತವಾಗಿರುವ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಬರೀಸ್‌, ಅರ್ಮಾನ್‌ ಸೇರಿದಂತೆ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ ಗೋಡೆ ಕುಸಿತ ಕಂಡ ಪರಿಣಾಮ ಅವಶೇಷಗಳಡಿ ಸಿಲುಕಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ, ಹೆಚ್ಚಿನ ಅನಾಹುತ ಆಗುವುದನ್ನ ತಪ್ಪಿಸಿದ್ದಾರೆ. ಜೆಸಿಬಿ ಯಂತ್ರದ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

 

Tags:
error: Content is protected !!