ಮೈಸೂರು: ರಾಜ್ಯದ ಹಲವೆಡೆ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಬೆಳಗಾವಿ, ರಾಯಚೂರು, ಯಾದಗಿರಿ, ಗದಗ, ಹಾವೇರಿ ಸೇರಿದಂತೆ ಆರೇಳು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ.
ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮೈಸೂರಿನಲ್ಲಿ ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.





