ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದರೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರೇ ದಂಡೇ ಹರಿದು ಬರುತ್ತಿದೆ.
ಮಕ್ಕಳಿಗೆ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ ಸೇರಿದಂತೆ ಎಲ್ಲಾ ಪ್ರೇಕ್ಷಣೀಯ ಸ್ಥಳಗಳಲ್ಲಿ ಸಂಜೆಯ ವೇಳೆಗೆ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ.
ನಗರದಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾದ ಪರಿಣಾಮ ವಾಹನಗಳು ಸಂಚರಿಸಲಾಗದೇ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗಲಿದೆ.
ಸಂಜೆಯ ವೇಳೆಗಂತೂ ಮೈಸೂರಿನ ಸಯ್ಯಾಜಿರಾವ್ ರಸ್ತೆಯ ಫುಟ್‌ಪಾತ್‌ನಲ್ಲಿ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಗಿಬೀಳುತ್ತಿದ್ದಾರೆ.
ದಸರಾ ರಜೆ ಮುಗಿಯುವವರೆಗೂ ಮೈಸೂರಿಗೆ ಪ್ರವಾಸಿಗರ ದಂಡೇ ಹರಿದು ಬರಲಿದ್ದು, ಪ್ರವಾಸೋದ್ಯಮಕ್ಕೆ ಮತ್ತಷ್ಟು ಆದಾಯ ಬರಲಿದೆ ಎನ್ನಲಾಗಿದೆ.