ಮೈಸೂರು: ಇಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಫೈನಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಭಾರತದ ಗೆಲುವು ಸಾಧಿಸಲೆಂದು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟ್ ಅಭಿಮಾನಿಗಳು 101 ಈಡುಗಾಯಿ ಒಡೆದು 101 ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು.
ಭಾರತ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಭಿಮಾನಿಗಳು, ಗಡಿಯಲ್ಲೂ ಮೈದಾನದಲ್ಲೂ ಗೆಲುವು ನಮ್ಮದೆ ಎಂದು ಜೈಕಾರ ಹಾಕಿದರು. ಭಾರತ ಮಾತೆಗೆ ಜೈ ಎಂದು ಘೋಷಣೆ ಕೂಗಿ ಸಂಭ್ರಮಪಟ್ಟ ಅಭಿಮಾನಿಗಳು ಭಾರತದ ಗೆಲುವಿಗೆ ಶುಭ ಹಾರೈಸಿದರು.





