ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ನಾಳೆ ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ ನಡೆಸಲು ಮುಂದಾಗಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡದ ಹಿಂದೂ ಜಾಗರಣಾ ವೇದಿಕೆ ಮುಖಂಡರು, ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ ಮಾಡುವುದು ಭಕ್ತರ ಹಕ್ಕು. ಅದನ್ನು ತಡೆಯುವುದು ಸರಿಯಲ್ಲ.
ಇನ್ನು ಪೊಲೀಸ್ ಇಲಾಖೆ ಪಾದಯಾತ್ರೆಗೆ ಅನುಮತಿ ನಿರಾಕರಿಸಿರುವ ಬಗ್ಗೆ ಮಾತನಾಡಿದ ಅವರು, ಪೊಲೀಸರ ಆಯುಕ್ತರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ. ಚಾಮುಂಡಿಬೆಟ್ಟವು ಪ್ರೇಕ್ಷಣೀಯ ಸ್ಥಳವಾಗಿದ್ದು, ಅಲ್ಲಿ ಪ್ರತಿದಿನ ಸಾವಿರಾರು ಭಕ್ತರು ಮತ್ತು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದ್ದರಿಂದ ಈ ಕಾರಣ ಸಮಂಜಸವಲ್ಲ ಎಂದರು.
ನಾಳೆ ಬೆಳಿಗ್ಗೆ 7.30ಕ್ಕೆ ಕುರುಬರಹಳ್ಳಿ ವೃತ್ತದಿಂದ ಪಾದಯಾತ್ರೆ ಪ್ರಾರಂಭಿಸುವುದಾಗಿ ಘೋಷಣೆ ಮಾಡಲಾಗಿದ್ದು, ನಾಡಿನ ಎಲ್ಲಾ ಚಾಮುಂಡಿ ಭಕ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…