ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್ ವಿಚಾರ ಕುರಿತು ಶಾಸಕ ತನ್ವೀರ್ ಸೇಠ್ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರವನ್ನು ಮುಂದುವರಿಸಿಕೊಂಡು ಹೋಗೋದು ಬಿಡೋದು ಅವರ ಇಚ್ಛೆಗೆ ಬಿಟ್ಟದ್ದು. ಇದು ಸದನದಲ್ಲಿ ಯಾಕೆ ಚರ್ಚೆಗೆ ಬಂತು ಅಂತ ಹೇಳಲ್ಲ. ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ. ತನಿಖೆ ಆಗಬೇಕು, ಆಗಬಾರದು ಅಂತ ಹೇಳಲಿಕ್ಕೂ ಹೋಗಲ್ಲ. ಯಾವ ಉದ್ದೇಶದಿಂದ ಚುನಾಯಿತ ಪ್ರತಿನಿಧಿಗಳು ಇರಬೇಕು ಆ ಉದ್ದೇಶದಿಂದ ಇರಬೇಕು. ಪ್ರಸಕ್ತ ಬೆಳವಣಿಗೆ ಕಂಡು ತುಂಬಾ ಬೇಸರವಾಗಿದೆ. ಸ್ಪಷ್ಟ ಬಹುಮತದಿಂದ ಆಯ್ಕೆಯಾದ ಸರ್ಕಾರ ಒಂದೊಳ್ಳೆ ಆಡಳಿತ ಕೊಡಬೇಕು. ವೈಯಕ್ತಿಕ ವಿಚಾರಗಳನ್ನ ರಾಜಕೀಯದಲ್ಲಿ ತಂದಿದ್ದು ದುರಂತ. ವೈಯಕ್ತಿಕ ವಿಚಾರ, ಜಾತಿ ವಿಚಾರ, ಪ್ರಾಂತ್ಯ ವಿಚಾರಗಳನ್ನು ರಾಜಕೀಯಕ್ಕೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಸತೀಶ್ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರು ಯಾರನ್ನಾದರೂ ಭೇಟಿ ಆಗಬಹುದು. ರಾಜ್ಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡುವ ಅನಿವಾರ್ಯತೆ ಇರುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ತಲೆಕೆಡೆಸಿಕೊಳ್ಳಲ್ಲ. 140 ಸಂಖ್ಯಾಬಲದ ಮುಂದೆ 19 ಜನರು ಏನೂ ಮಾಡಲಿಕ್ಕೆ ಆಗಲ್ಲ ಎಂದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…