ಮೈಸೂರು ನಗರ

ಸದನದಲ್ಲಿ ಹನಿಟ್ರ್ಯಾಪ್‌ ವಿಚಾರ ಪ್ರಸ್ತಾಪ: ಶಾಸಕ ತನ್ವೀರ್‌ ಸೇಠ್‌ ತೀವ್ರ ಬೇಸರ

ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್‌ ವಿಚಾರ ಕುರಿತು ಶಾಸಕ ತನ್ವೀರ್‌ ಸೇಠ್‌ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ.

ಹನಿಟ್ರ್ಯಾಪ್‌ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರವನ್ನು ಮುಂದುವರಿಸಿಕೊಂಡು ಹೋಗೋದು ಬಿಡೋದು ಅವರ ಇಚ್ಛೆಗೆ ಬಿಟ್ಟದ್ದು. ಇದು ಸದನದಲ್ಲಿ ಯಾಕೆ ಚರ್ಚೆಗೆ ಬಂತು ಅಂತ ಹೇಳಲ್ಲ. ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ. ತನಿಖೆ ಆಗಬೇಕು, ಆಗಬಾರದು ಅಂತ ಹೇಳಲಿಕ್ಕೂ ಹೋಗಲ್ಲ. ಯಾವ ಉದ್ದೇಶದಿಂದ ಚುನಾಯಿತ ಪ್ರತಿನಿಧಿಗಳು ಇರಬೇಕು ಆ ಉದ್ದೇಶದಿಂದ ಇರಬೇಕು. ಪ್ರಸಕ್ತ ಬೆಳವಣಿಗೆ ಕಂಡು ತುಂಬಾ ಬೇಸರವಾಗಿದೆ. ಸ್ಪಷ್ಟ ಬಹುಮತದಿಂದ ಆಯ್ಕೆಯಾದ ಸರ್ಕಾರ ಒಂದೊಳ್ಳೆ ಆಡಳಿತ ಕೊಡಬೇಕು. ವೈಯಕ್ತಿಕ ವಿಚಾರಗಳನ್ನ ರಾಜಕೀಯದಲ್ಲಿ ತಂದಿದ್ದು ದುರಂತ. ವೈಯಕ್ತಿಕ ವಿಚಾರ, ಜಾತಿ ವಿಚಾರ, ಪ್ರಾಂತ್ಯ ವಿಚಾರಗಳನ್ನು ರಾಜಕೀಯಕ್ಕೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಸತೀಶ್‌ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರು ಯಾರನ್ನಾದರೂ ಭೇಟಿ ಆಗಬಹುದು. ರಾಜ್ಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡುವ ಅನಿವಾರ್ಯತೆ ಇರುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ತಲೆಕೆಡೆಸಿಕೊಳ್ಳಲ್ಲ. 140 ಸಂಖ್ಯಾಬಲದ ಮುಂದೆ 19 ಜನರು ಏನೂ ಮಾಡಲಿಕ್ಕೆ ಆಗಲ್ಲ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago