Mysore
27
clear sky

Social Media

ಶನಿವಾರ, 31 ಜನವರಿ 2026
Light
Dark

ಹನಿಟ್ರ್ಯಾಪ್‌ ಬಗ್ಗೆ ಸಮಗ್ರ ತನಿಖೆ ಆಗಬೇಕು: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ವಿಚಾರ ಕುರಿತು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್‌ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಹನಿಟ್ರ್ಯಾಪ್‌ ಬಗ್ಗೆ ಸುನಿಲ್ ಕುಮಾರ್, ರಾಜಣ್ಣ ಮಾತನಾಡಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ಇತಿಹಾಸ ಇದೆ. ಇತ್ತೀಚಿನ ದಿನಗಳ ಘಟನೆ ನೋಡಿದ್ರೆ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ ಎಂದು ವ್ಯಂಗ್ಯವಾಡಿದರು. ಹನಿಟ್ರ್ಯಾಪ್‌ ಬಗ್ಗೆ ಸೂಕ್ತ ತನಿಖೆ ಮಾಡಿದರೆ ಮಾತ್ರ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ಆಗ್ರಹಿಸಿದರು.

ಇನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅದು ಬಿಜೆಪಿಯ ಆಂತರಿಕ ವಿಚಾರವಾಗಿದ್ದು, ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಈ ಹಿಂದೆ ಅವರ ಬಗ್ಗೆ ಮಾತನಾಡಿದ್ದೆ. ಆಗ ಅವರೇ ಫೋನ್ ಮಾಡಿ ಮಾತನಾಡಿ ಸರಿ ಮಾಡಿಕೊಂಡರು. ಈಗ ನಮ್ಮ ಮಧ್ಯೆ ಏನೂ ಇಲ್ಲ. ಮೇಲಾಗಿ ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಮುಂದೆಯೂ ಏನೇನೂ ಬೆಳವಣಿಗೆ ನಡೆಯುತ್ತೆ ಅದನ್ನು ಎಲ್ಲರೂ ಕಾದು ನೋಡೋಣ ಎಂದು ಅಚ್ಚರಿಯ ಹೇಳಿಕೆ ನೀಡಿದರು.

 

Tags:
error: Content is protected !!