ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್ ವಿಚಾರ ಕುರಿತು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಸುನಿಲ್ ಕುಮಾರ್, ರಾಜಣ್ಣ ಮಾತನಾಡಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ಇತಿಹಾಸ ಇದೆ. ಇತ್ತೀಚಿನ ದಿನಗಳ ಘಟನೆ ನೋಡಿದ್ರೆ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ ಎಂದು ವ್ಯಂಗ್ಯವಾಡಿದರು. ಹನಿಟ್ರ್ಯಾಪ್ ಬಗ್ಗೆ ಸೂಕ್ತ ತನಿಖೆ ಮಾಡಿದರೆ ಮಾತ್ರ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ಆಗ್ರಹಿಸಿದರು.
ಇನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅದು ಬಿಜೆಪಿಯ ಆಂತರಿಕ ವಿಚಾರವಾಗಿದ್ದು, ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಈ ಹಿಂದೆ ಅವರ ಬಗ್ಗೆ ಮಾತನಾಡಿದ್ದೆ. ಆಗ ಅವರೇ ಫೋನ್ ಮಾಡಿ ಮಾತನಾಡಿ ಸರಿ ಮಾಡಿಕೊಂಡರು. ಈಗ ನಮ್ಮ ಮಧ್ಯೆ ಏನೂ ಇಲ್ಲ. ಮೇಲಾಗಿ ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಮುಂದೆಯೂ ಏನೇನೂ ಬೆಳವಣಿಗೆ ನಡೆಯುತ್ತೆ ಅದನ್ನು ಎಲ್ಲರೂ ಕಾದು ನೋಡೋಣ ಎಂದು ಅಚ್ಚರಿಯ ಹೇಳಿಕೆ ನೀಡಿದರು.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…