ಮೈಸೂರು: ಹನಿಟ್ರ್ಯಾಪ್ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಶ್ರೀವತ್ಸ ಅವರು, ಸಚಿವ ರಾಜಣ್ಣ ಅವರೇ ತಮ್ಮ ಹಾಗೂ ತಮ್ಮ ಮಗನ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದಿದ್ದಾರೆ. ಎರಡೂ ಕಡೆಯವರೂ ಇರಬಹುದಾದ ಸಿಡಿ ಫ್ಯಾಕ್ಟರಿ ಇದೆ ಅಂತಿದ್ದಾರೆ. ಮೂರು ದಿನ ಆದ್ರೂ ಸಚಿವ ರಾಜಣ್ಣ ದೂರು ನೀಡಿಲ್ಲ. ಈ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಆದ್ರೆ ರಾಜಣ್ಣ ಜಡ್ಜ್‌ಗಳದ್ದೂ ಇದೆ ಎಂದು ಹೇಳಿದ್ದಾರೆ. ಸರ್ಕಾರ ಇಷ್ಟರಲ್ಲಿ ತನಿಖಾ ಆಯೋಗ ರಚನೆ ಮಾಡಬೇಕಿತ್ತು. ಇದೆಲ್ಲವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.





