ಮೈಸೂರು : ಮಹಾರಾಷ್ಟ್ರದ ಕಾರ್ಜತ್‌ನಲ್ಲಿ ಇತ್ತೀಚೆಗೆ ನಡೆದ ಹೂಫ್‌ಬೀಟ್ ಮ್ಯಾರಥಾನ್ – ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಚಾಮುಂಡಿ ಹಾರ್ಸಸ್ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳ ನಡುವೆ ಮೈಸೂರಿನ ಯುವ ರೈಡರ್‌ಗಳು ತಮ್ಮ ಸಾಮರ್ಥ್ಯ, ಸಹನಶಕ್ತಿ ಹಾಗೂ ಕುದುರೆಯೊಂದಿಗೆ ಹೊಂದಾಣಿಕೆಯ ಕೌಶಲವನ್ನು ಯಶಸ್ವಿಯಾಗಿ ಪ್ರದರ್ಶಿಸಿದರು. ಈ ಚಾಂಪಿಯನ್‌ಶಿಪ್‌ನಲ್ಲಿ 20 ಕಿ.ಮೀ. ಮತ್ತು 40 ಕಿ.ಮೀ ಎಂಡ್ಯುರನ್ಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕುದುರೆಯ ಆರೋಗ್ಯ ಪರೀಕ್ಷೆ, ವೇಗ ನಿಯಂತ್ರಣ, ಸಮಯ ನಿರ್ವಹಣೆ ಹಾಗೂ ರೈಡರ್‌ಗಳ ದೈಹಿಕ-ಮಾನಸಿಕ ಸಮತೋಲನವನ್ನು ಪರಿಶೀಲಿಸುವ ಕಠಿಣ ಸ್ಪರ್ಧೆಯಾಗಿದ್ದರೂ, ಚಾಮುಂಡಿ ಹಾರ್ಸಸ್ ಸಂಸ್ಥೆಯ ಶಿಸ್ತಿನ ತರಬೇತಿಯನ್ನು ಅವರು ಸದುಪಯೋಗಪಡಿಸಿಕೊಂಡರು.
ಮೈಸೂರಿನ ಸದ್ವಿದ್ಯಾ ಪ್ರೌಢಶಾಲೆ, ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಸೇಂಟ್ ಸೆಂಟ್ರಲ್ ಜೋಸೆಫ್ ಶಾಲೆಗಳ ವಿದ್ಯಾರ್ಥಿಗಳಾದ ಕ್ರಮವಾಗಿ ಎಲ್.ಕ್ಷಮಿನಾಮ್ ಅರಸ್, ಎಸ್.ಕೆ.ಲೌಕ್ಯ ಮತ್ತು ಎಸ್.ಕೆ.ಅದ್ವಿಕಾ ಈ ಸಾಧನೆ ಮಾಡಿದವರು.
ಚಾಮುಂಡಿ ಹಾರ್ಸಸ್ ಸಂಸ್ಥೆಯ ವ್ಯವಸ್ಥಿತ ತರಬೇತಿ, ಪಾಲಕರ ಪ್ರೋತ್ಸಾಹ ಹಾಗೂ ವಿದ್ಯಾರ್ಥಿಗಳ ನಿರಂತರ ಶ್ರಮದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲೂ ಮೈಸೂರಿನ ಈ ಯುವ ಪ್ರತಿಭೆಗಳು ಉತ್ತಮ ಪ್ರದರ್ಶನ ನೀಡುವ ಸಾಧ್ಯತೆ ಇದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…