ಮೈಸೂರು ನಗರ

ಮೈಸೂರು ಭಾಗದಲ್ಲಿ ಮಾನವ-ಪ್ರಾಣಿ ಸಂಘರ್ಷ ವಿಚಾರ: ಶಾಸಕ ಶ್ರೀವತ್ಸ ಹೇಳಿದ್ದಿಷ್ಟು.!

ಮೈಸೂರು: ಮೈಸೂರು ಭಾಗದಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಅರಣ್ಯ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳು ಹಾಗೂ ಒತ್ತುವರಿಗಳನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ರಮ ಒತ್ತುವರಿ ಸಂಬಂಧ ಜನರ ಆಕ್ರೋಶಕ್ಕೂ ಮೊದಲು ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ಮೂಲಕ ಮಾನವ ಪ್ರಾಣಿ ಸಂಘರ್ಷವನ್ನು ತಡೆಯಬೇಕು. ಅರಣ್ಯ ವ್ಯಾಪ್ತಿಯಲ್ಲಿ ಇರುವ ರೆಸಾರ್ಟ್‌ಗಳಲ್ಲಿ ರಾತ್ರಿ ವೇಳೆ ಫೈರ್ ಕ್ಯಾಂಪ್ ಹಾಕುತ್ತಾರೆ. ಇದರಿಂದ ಪ್ರಾಣಿಗಳಿಗೆ ತುಂಬಾ ತೊಂದರೆ ಆಗುತ್ತಿದೆ. ಭಯದಿಂದಲೇ ಕಾಡುಪ್ರಾಣಿಗಳು ನಾಡಿನತ್ತ ಆಗಮಿಸುತ್ತಿವೆ. ಇದಕ್ಕೆ ಅರಣ್ಯ ಇಲಾಖೆ ಕಡಿವಾಣ ಹಾಕಲಿ ಎಂದು ಆಗ್ರಹಿಸಿದರು.

ಇನ್ನು ಎಲೆಕ್ಷನ್ ಕಮಿಷನರ್ ರಾಜಕೀಯ ಪುಡಾರಿ ರೀತಿ ವರ್ತನೆ ಮಾಡುತ್ತಿದ್ದಾರೆ ಎಂಬ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಯಾವ ಯಾವ ಸಮಯದಲ್ಲಿ ಸಂವಿಧಾನ ದುರುಪಯೋಗ ಆಯ್ತು ಎಂಬುದನ್ನು ನೀವೇ ಅರಿತುಕೊಳ್ಳಿ. ನೀವು ಚುನಾವಣೆಯಲ್ಲಿ ಗೆದ್ದರೆ ಮತಗಳ್ಳತನ ಇಲ್ಲ. ಸೋತರೆ ಮಾತ್ರ ಮತಗಳ್ಳತನ ಅನ್ನೋದಾ? ಈ ಬಗ್ಗೆ ನೀವೇ ಪರಾಮರ್ಶೆ ಮಾಡಬೇಕು ಎಂದು ಯತೀಂದ್ರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ

ಇನ್ನು ಆರ್‌ಎಸ್‌ಎಸ್‌ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪದೇ ಪದೇ ಹೇಳಿಕೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಬಗ್ಗೆ ಯಾಕಿಷ್ಟು ಕೋಪ ನಿಮಗೆ. ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್ ಖರ್ಗೆ ಪದೇ ಪದೇ ಹೇಳಿಕೆ ಕೊಡ್ತಿದ್ದಾರೆ. ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಕ್ಕೆ ಸರ್ಕಾರ ಮುಂದಾಗಿದೆ. ಇಷ್ಟಾದರೂ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಒಂದೇ ಒಂದು ಮಾತು ಆಡಿಲ್ಲ. ತಮ್ಮ ಮಗ ಎಂಬ ಕಾರಣಕ್ಕೆ ಹೇಳಿಕೆ ಕೊಡುತ್ತಿಲ್ಲವೇ? ಆರ್‌ಎಸ್‌ಎಸ್‌ ಚಟುವಟಿಕೆ ಬಗ್ಗೆ ನಿಮಗೆ ಗೊತ್ತಿಲ್ವ? ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಆದರೆ ಇದರ ಬಗ್ಗೆ ಅವರಾದರು ಒಂದು ಹೇಳಿಕೆ ಕೊಡಬೇಕಲ್ವಾ? ಎಂದು ಪ್ರಶ್ನೆ ಮಾಡಿದರು.

ಇನ್ನು ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ವಿಚಾರ ತೀವ್ರ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿ ನೋಡಿದ್ರೆ ಖಂಡಿತ ಕ್ರಾಂತಿ ಆಗುತ್ತದೆ. ಅಂತಹ ಬೆಳವಣಿಗೆಗಳು ಕಾಣುತ್ತಿವೆ. ನಮ್ಮ ಜಿಲ್ಲೆಯ ಸಿಎಂ ಬದಲಾವಣೆ ಆಗುವ ತರ ಕಾಣುತ್ತಿದೆ. ನವೆಂಬರ್ ಕ್ರಾಂತಿಯಂತೂ ಆಗೇ ಆಗುತ್ತದೆ ಎಂದು ಭವಿಷ್ಯ ನುಡಿದರು.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago