ಮೈಸೂರು: ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ತಳಹದಿಯ ಮೇಲೆ ಕಟ್ಟಿರುವ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂದು ಪ್ರಜಾಪ್ರಭುತ್ವ ಮಾನವ ಸರಪಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು ಸಾವಿರಾರು ಜನರು ಭಾಗಿಯಾಗಿದ್ದರು.
ಮಾನವ ಸರಪಳಿಯಲ್ಲಿ ಭಾಗಿಯಾಗಿದ್ದವರು ಸಾಲಿನಲ್ಲಿ ನಿಂತು ನಾಡಗೀತೆ, ಮುಖ್ಯ ಅತಿಥಿಗಳಿಂದ ಭಾಷಣ, ಸಂವಿಧಾನದ ಪ್ರಸ್ತಾವ ಓದುವುದು, ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವ ಕಾರ್ಯಕ್ರಮ ನಡೆಯಿತು.
ಮಾನವ ಸರಪಳಿಯಲ್ಲಿಯೇ ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಎಂಬ ಘೋಷಣೆ ಕೂಗಿ ಸರಪಳಿಯನ್ನು ಕಳಚುವ ಪ್ರಕ್ರಿಯೆ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಹರೀಶ್ ಗೌಡ, ಎಸ್ಪಿ ಸೀಮಾ ಲಾಟ್ಕರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…