Mysore
33
overcast clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಮೈಸೂರಿನ ಎಂಡಿಸಿಸಿ ಬ್ಯಾಂಕ್‌ ಮುಂದೆ ಹುಣಸೂರು ರೈತರ ಪ್ರತಿಭಟನೆ

ಮೈಸೂರು: ಸಮಯಕ್ಕೆ ಸರಿಯಾಗಿ ಸಾಲ ನೀಡುತ್ತಿಲ್ಲ ಎಂದು ಆರೋಪಿಸಿ ಹುಣಸೂರು ರೈತರು ಮೈಸೂರಿನ ಎಂಡಿಸಿಸಿ ಬ್ಯಾಂಕ್‌ ಮುಂದೆ ಪ್ರತಿಭಟನೆ ನಡೆಸಿದರು.

ಮೈಸೂರಿನ ಎಂಡಿಸಿಸಿ ಬ್ಯಾಂಕ್ ಬಳಿ ಹುಣಸೂರು ಶಾಸಕ ಜಿ.ಡಿ‌ ಹರೀಶ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ನೂರಾರು ರೈತರು, ಬ್ಯಾಂಕ್‌ ಸಿಬ್ಬಂದಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಾಲ ಮರುಪಾವತಿ ಮಾಡಿದ್ದರೂ ಸಾಲ ಕೊಡಲು ಬ್ಯಾಂಕ್‌ ಮೀನಾ ಮೇಷ ಎಣಿಸುತ್ತಿದೆ ಎಂದು ಆರೋಪಿಸಿದ ರೈತರು, ಆದಷ್ಟು ಬೇಗ ಸಾಲ ಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತರ ಜೊತೆ ಹುಣಸೂರು ತಾಲ್ಲೂಕಿನ ಹಲವು ಕೃಷಿ ಪತ್ತಿನ ಸಹಕಾರಿ ಸಂಘಗಳ ಸದಸ್ಯರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು, ಸಾಲ ಮರುಪಾವತಿ ಮಾಡಿದ್ದರೂ ರೈತರಿಗೆ ಸಾಲ ಕೊಡುತ್ತಿಲ್ಲ. ಬ್ಯಾಂಕ್ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸಾಲ ಕೊಡಲು ಕೂಡ ರಾಜಕೀಯ ಮಾಡುತ್ತಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ತಾರತಮ್ಯ ಮಾಡುತ್ತಾರೆ ಎಂದು ಕಿಡಿಕಾರಿದ ಅವರು, ಸಾಲ ಪಡೆಯಲು ಆನ್ ಲೈನ್ ಮೂಲಕ ಲಂಚ ಪಡೆದ ಅಧಿಕಾರಿಯ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು. ರೈತರಿಗೆ ಮೋಸ ಮಾಡುತ್ತಿದ್ದು, ನಮ್ಮ ಕುಟುಂಬವನ್ನ ಸಹಕಾರಿ ಕ್ಷೇತ್ರದಿಂದ ದೂರ ಇಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ರೈತರಿಗೆ ಒಳಿತಾಗುತ್ತೆ ಅಂದರೆ ನಾನು ಅದನ್ನೂ ತ್ಯಾಗ ಮಾಡಲಿಕ್ಕೆ ಸಿದ್ಧನಿದ್ದೇನೆ. ರೈತರಿಗೆ ದಯವಿಟ್ಟು ಅನ್ಯಾಯ ಮಾಡಬೇಡಿ ಎಂದು ಮನವಿ ಮಾಡಿದರು.

 

Tags:
error: Content is protected !!