ಮೈಸೂರು: ಸಮಯಕ್ಕೆ ಸರಿಯಾಗಿ ಸಾಲ ನೀಡುತ್ತಿಲ್ಲ ಎಂದು ಆರೋಪಿಸಿ ಹುಣಸೂರು ರೈತರು ಮೈಸೂರಿನ ಎಂಡಿಸಿಸಿ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದರು.
ಮೈಸೂರಿನ ಎಂಡಿಸಿಸಿ ಬ್ಯಾಂಕ್ ಬಳಿ ಹುಣಸೂರು ಶಾಸಕ ಜಿ.ಡಿ ಹರೀಶ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ನೂರಾರು ರೈತರು, ಬ್ಯಾಂಕ್ ಸಿಬ್ಬಂದಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಾಲ ಮರುಪಾವತಿ ಮಾಡಿದ್ದರೂ ಸಾಲ ಕೊಡಲು ಬ್ಯಾಂಕ್ ಮೀನಾ ಮೇಷ ಎಣಿಸುತ್ತಿದೆ ಎಂದು ಆರೋಪಿಸಿದ ರೈತರು, ಆದಷ್ಟು ಬೇಗ ಸಾಲ ಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತರ ಜೊತೆ ಹುಣಸೂರು ತಾಲ್ಲೂಕಿನ ಹಲವು ಕೃಷಿ ಪತ್ತಿನ ಸಹಕಾರಿ ಸಂಘಗಳ ಸದಸ್ಯರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಡಿ.ಹರೀಶ್ ಗೌಡ ಅವರು, ಸಾಲ ಮರುಪಾವತಿ ಮಾಡಿದ್ದರೂ ರೈತರಿಗೆ ಸಾಲ ಕೊಡುತ್ತಿಲ್ಲ. ಬ್ಯಾಂಕ್ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸಾಲ ಕೊಡಲು ಕೂಡ ರಾಜಕೀಯ ಮಾಡುತ್ತಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ತಾರತಮ್ಯ ಮಾಡುತ್ತಾರೆ ಎಂದು ಕಿಡಿಕಾರಿದ ಅವರು, ಸಾಲ ಪಡೆಯಲು ಆನ್ ಲೈನ್ ಮೂಲಕ ಲಂಚ ಪಡೆದ ಅಧಿಕಾರಿಯ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು. ರೈತರಿಗೆ ಮೋಸ ಮಾಡುತ್ತಿದ್ದು, ನಮ್ಮ ಕುಟುಂಬವನ್ನ ಸಹಕಾರಿ ಕ್ಷೇತ್ರದಿಂದ ದೂರ ಇಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ರೈತರಿಗೆ ಒಳಿತಾಗುತ್ತೆ ಅಂದರೆ ನಾನು ಅದನ್ನೂ ತ್ಯಾಗ ಮಾಡಲಿಕ್ಕೆ ಸಿದ್ಧನಿದ್ದೇನೆ. ರೈತರಿಗೆ ದಯವಿಟ್ಟು ಅನ್ಯಾಯ ಮಾಡಬೇಡಿ ಎಂದು ಮನವಿ ಮಾಡಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…