ಮೈಸೂರು ನಗರ

ಪತ್ನಿ ಕೊಲೆಗೆ ಪತಿಯಿಂದಲೇ ಸುಫಾರಿ..!

ಮೈಸೂರು : ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಲು ಯುವಕರಿಬ್ಬರಿಗೆ ಸುಫಾರಿ ನೀಡಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆತ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಈ ನಡುವೆ ಯುವಕರಿಂದ ಹಲ್ಲೆಗೀಡಾಗಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಎಂಶ್ರೀ ನಗರದ ನಿವಾಸಿ ಮಹೇಶ್ ಎಂಬವರ ಮನೆಗೆ ನುಗ್ಗಿದ ದುಷ್ಕರ್ಮಿಗಳಿಬ್ಬರು ನಾಗರತ್ನ ಅವರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕೊಠಡಿಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಕುರಿತು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರಿಗೆ ಅಚ್ಚರಿ ಕಾದಿತ್ತು. ಏಕೆಂದರೆ ಪತಿಯೇ ಪತ್ನಿ ಕೊಲೆಗೆ ಸುಫಾರಿ ನೀಡಿದ್ದ ವಿಚಾರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರು ನಾಗರತ್ನ ಅವರ ಪತಿ ಮಹೇಶ್‌ನನ್ನು ವಶಕ್ಕೆ ಪಡೆದಿದ್ದು, ಸುಫಾರಿ ಪಡೆದಿದ್ದ ಯುವಕರ ಪತ್ತೆಗೆ ಬಲೆ ಬೀಸಿದ್ದಾರೆ.

ನಡೆದದ್ದಾದರೂ ಏನು?:
ಪಾನೀಪುರಿ ವ್ಯಾಪಾರಿಯಾಗಿದ್ದ ಮಹೇಶ್ ಹಾಗೂ ನಾಗರತ್ನ ಅವರಿಗೆ ೧೮ ವರ್ಷಗಳ ಹಿಂದೆ ವಿವಾಹವಾಗಿತ್ತು. ದಂಪತಿಗೆ ಮಕ್ಕಳಿರಲಿಲ್ಲ. ಹಣಕಾಸು ವ್ಯವಹಾರ ಮಾಡಿಕೊಂಡಿದ್ದ ನಾಗರತ್ನ ಪತಿಯನ್ನು ಕೀಳಾಗಿ ನೋಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:-ಹೊಸ ವರ್ಷ ಸಂಭ್ರಮ | ಮಾರ್ಗಸೂಚಿ ಪ್ರಕಟ ; ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಸಾರ್ವಜನಿಕವಾಗಿ ನಿಂದಿಸುತ್ತಿದ್ದುದಲ್ಲದೆ, ನಿನ್ನ ಕೈಲಿ ಏನೂ ಆಗುವುದಿಲ್ಲ ಎಂದು ನೆಂಟರಿಷ್ಟರ ಸಮ್ಮುಖದಲ್ಲಿಯೇ ಮೂದಲಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ರೋಸಿ ಹೋಗಿದ್ದ ಪತಿ ಮಹೇಶ್ ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದಾನೆ.
ನಂತರ ಪರಿಚಿತರ ಮೂಲಕ ಆತನಿಗೆ ಕೊಡಗಿನ ವಿರಾಜಪೇಟೆ ನಿವಾಸಿಗಳಾದ ಭಾಸ್ಕರ್ ಹಾಗೂ ಅಭಿ ಎಂಬವರ ಪರಿಚಯವಾಗಿದೆ. ಹೀಗಾಗಿ ಪತ್ನಿಯನ್ನು ಹತ್ಯೆ ಮಾಡುವಂತೆ ಅವರಿಗೆ ಸುಫಾರಿ ನೀಡಿದ್ದಾನೆ. ಹತ್ಯೆಯ ನಂತರ ೫ ಲಕ್ಷ ರೂ. ನೀಡುವುದಾಗಿ ಹೇಳಿದ್ದಾನೆ.

ಅದರಂತೆ ಮಂಗಳವಾರ ರಾತ್ರಿ ಮಹೇಶ್ ಮನೆಗೆ ತೆರಳಿದ ಯುವಕರು ನಾಗರತ್ನ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಆಕೆ ಇದ್ದ ಕೊಠಡಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸ್ಥಳೀಯರು ಮಹೇಶ್‌ಗೆ ವಿಚಾರ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಬಂದ ಅವರು ಏನೂ ಅರಿಯದವರಂತೆ ನಾಗರತ್ನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ನಂತರ ಈ ಸಂಬಂಧ ಮೇಟಗಳ್ಳಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದರು.

ವಿಚಾರಣೆ ಆರಂಭಿಸಿದ ಪೊಲೀಸರಿಗೆ ಮಹೇಶ್ ವರ್ತನೆ ಅನುಮಾನ ಮೂಡಿಸಿದೆ. ನಂತರ ಅವರು ತಮ್ಮದೇ ಆದ ರೀತಿಯಲ್ಲಿ ವಿಚಾರಣೆ ನಡೆಸಿದ ವೇಳೆ ಇಡೀ ಪ್ರಕರಣ ಬೆಳಕಿಗೆ ಬಂದಿದೆ.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

6 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

6 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

6 hours ago