ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.
ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂದು ಅನುಮಾನಗೊಂಡ ಪತಿ ಮಹೇಶ್, ಪತ್ನಿ ಪುಷ್ಪ ಅವರನ್ನು ಕೊಡಲಿಯಿಂದ ಹೊಡೆದು ಕ್ರೂರವಾಗಿ ಹತ್ಯೆ ಮಾಡಿದ್ದಾನೆ.
ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪುಷ್ಪ ಅವರು ಪ್ರತಿ ದಿನ ಕೆಲಸ ಮುಗಿಸಿ ರಾತ್ರಿ ಮನೆಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಶುರುವಾದ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿದೆ.
ಎಂದಿನಂತೆ ನಿನ್ನೆ ರಾತ್ರಿ ಪುಷ್ಪಾ ಕೆಲಸ ಮುಗಿಸಿ ಮನೆಗೆ ಬಂದಾಗ ದಂಪತಿ ನಡುವೆ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಆಕ್ರೋಶಗೊಂಡ ಮಹೇಶ್ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಪತ್ನಿಯನ್ನು ಕೊಂದ ನಂತರ ಪಶ್ಚಾತ್ತಾಪಕ್ಕೊಳಗಾದ ಮಹೇಶ್ ತಾನೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ನರಸಿಂಹರಾಜ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…