ಮೈಸೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿಯೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ.
ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆಯನ್ನು ಇಂದೇ ಅನಾವರಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆ ಅನಾವರಣಕ್ಕೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವ ಧೋರಣೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: 70ನೇ ಕನ್ನಡ ರಾಜ್ಯೋತ್ಸವ: ಮೈಸೂರಿನ ಓವಲ್ ಮೈದಾನದಲ್ಲಿ ಧ್ವಜಾರೋಹಣ.
ಈ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದರೂ ಪ್ರಯೋಜನ ಆಗಿಲ್ಲ. ಇಂದೇ ಅರಸು ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಬೇಕು. ಕನ್ನಡ ಕಾಜ್ಯೋತ್ಸವ ದಿನವಾದ ಇಂದಿಗಿಂತ ಒಳ್ಳೆಯದಿನ ಇಲ್ಲ. ಇಂದೇ ಪ್ರತಿಮೆ ಲೋಕಾರ್ಪಣೆ ಮಾಡುವಂತೆ ಆಗ್ರಹಿಸಿದರು.
ಇದೇ ವೇಳೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತಡೆದರು.





