ಮೈಸೂರು ನಗರ

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ತೀರ್ಮಾನ ದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೊಸ ಸರ್ಕಾರ ನಾಯಕರನ್ನು ಆಯ್ಕೆ ಮಾಡಬೇಕಿದೆ. ಡಿಕೆ ಶಿವಕುಮಾರ್ ಬೆಂಬಲಕ್ಕೆ ವರಿಷ್ಠರು ಹಾಗೂ ಶಾಸಕರು ಇದ್ದಾರೆ ಎನ್ನುವ ನಂಬಿಕೆ ಇದೆ. ಹಾಲಿ ಸಚಿವರುಗಳು ತ್ಯಾಗ ಮಾಡಿದ್ದಲ್ಲಿ ಹೊಸಬರಿಗೆ ಅವಕಾಶ ಸಿಗಲಿದೆ. ಅನುಭವ ಇರುವವರು ಹಾಗೂ ಹೊಸತನದಲ್ಲಿ ಆಡಳಿತ ನಡೆಸುವವರಿಗೆ ಅವಕಾಶ ಸಿಗಬೇಕು. ಹೊಸ ನಾಯಕರನ್ನು ಆಯ್ಕೆ ಮಾಡಬೇಕು ಎನ್ನುವ ಅಪೇಕ್ಷೆ ನನ್ನಲ್ಲಿದೆ. ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ. ಪಕ್ಷ ನನ್ನನ್ನು ಗುರುತಿಸಲಿದೆ ಎನ್ನುವ ನಂಬಿಕೆ ಇದೆ. ಈ ಬಗ್ಗೆ ವರಿಷ್ಠರ ಜೊತೆ ಮಾತುಕತೆ ನಡೆಸಿಲ್ಲ ಎಂದರು.

ಇನ್ನು ಕಳೆದ ಬಾರಿ ನಮ್ಮ ಜಿಲ್ಲೆಯವರೇ ಸಿಎಂ ಆಗಿದ್ದರಿಂದ ಈ ಜಿಲ್ಲೆಯಲ್ಲಿ ನನಗೆ ಅವಕಾಶ ಸಿಗಲಿಲ್ಲ. ಈ ಬಾರೀ ಅನ್ಯ ಜಿಲ್ಲೆಯವರು ಸಿಎಂ ಆಗುವುದರಿಂದ ನನಗೆ ಅವಕಾಶ ಸಿಗಲಿದೆ. ಎಲ್ಲವೂ ಸುಗಮವಾಗಿ ಆಗಬೇಕು. ನಾನು ಪಕ್ಷ ಹಾಗೂ ಪಕ್ಷದ ಸಿದ್ಧಾಂತ ನಂಬಿದ್ದೇನೆ. ಡಿಕೆ ಶಿವಕುಮಾರ್ ಅಥವಾ ಯಾರೇ ಮುಖ್ಯಮಂತ್ರಿ ಆದರೂ ನನ್ನನ್ನು ಗುರುತಿಸಲಿದ್ದಾರೆ ಎನ್ನುವ ನಂಬಿಕೆ ಇದೆ. ಹೊಸಬರಿಗೆ ಹೊಸ ನಾಯಕತ್ವ ಸೃಷ್ಟಿಸುವ ಜೊತೆಗೆ ಸಂಪುಟದಲ್ಲಿ ಅನುಭವ, ಹಿರಿತನ ಹಾಗೂ ಹೊಸಬರನ್ನು ಗುರುತಿಸಿ ಸರ್ಕಾರ ರಚಿಸಬೇಕಿದೆ. ಖಂಡಿತ ಈ ಬಾರೀ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವನಾಗುವ ಅವಕಾಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

11 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

12 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

12 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

13 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

13 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

16 hours ago